ಹೈ-ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಅಗತ್ಯ ಕ್ರಮ: ಎಚ್.ಡಿ. ಕುಮಾರಸ್ವಾಮಿ

ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಇಂದು ಕಲಬುರಗಿಯಲ್ಲಿ ಜಿಲ್ಲೆಯ ...
ಸಿಎಂ ಕುಮಾರಸ್ವಾಮಿ ಅವರು ಇಂದು ಕಲಬುರಗಿಯಲ್ಲಿ ಕಲಬುರಗಿ ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಸಿಎಂ ಕುಮಾರಸ್ವಾಮಿ ಅವರು ಇಂದು ಕಲಬುರಗಿಯಲ್ಲಿ ಕಲಬುರಗಿ ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿದರು.
Updated on
ಕಲಬುರಗಿ: ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಇಂದು ಕಲಬುರಗಿಯಲ್ಲಿ ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಕಲಬುರ್ಗಿ ಜಿಲ್ಲೆಗೆ ಸಮರ್ಪಕ ಕುಡಿಯುವ ನೀರು ಪೂರೈಕೆ, ಕಲಬುರ್ಗಿ ಜಿಲ್ಲೆಯ ಸಮಗ್ರ ಅಭಿವೃದ್ಧಿ ಹಾಗೂ ಕಲಬುರ್ಗಿ ಜಿಲ್ಲೆಯ ಬರ ಪರಿಹಾರ ಕಾಮಗಾರಿಗಳ ಬಗ್ಗೆ ಮಾಹಿತಿ ಪಡೆದು ಸೂಕ್ತ ಮಾರ್ಗದರ್ಶನ ನೀಡಿದರು. 
ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ ಖರ್ಗೆ, ಕಲಬುರ್ಗಿ ವಿಭಾಗದ ಪ್ರಾದೇಶಿಕ ಆಯುಕ್ತ ಸುಭೋದ್ ಯಾದವ್, ಐ.ಜಿ.ಪಿ. ಮನೀಶ್ ಕರ್ಬಿಕರ್, ಜಿಲ್ಲಾಧಿಕಾರಿ ಆರ್. ವೆಂಕಟೇಶ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಕ ಅಧಿಕಾರಿ ರಾಜಾ ಪಿ ಮತ್ತಿತರರು ಪಾಲ್ಗೊಂಡಿದ್ದರು
ಹೈದರಾಬಾದ್ ಕರ್ನಾಟಕ ಭಾಗದ ಎಲ್ಲ ಜಿಲ್ಲೆಗಳ ಸಮಗ್ರ ಅಭಿವೃದ್ಧಿಯ ನಿಟ್ಟಿನಲ್ಲಿ ಶಿಕ್ಷಣ, ಆರೋಗ್ಯ ಹಾಗೂ ಯುವಕರ ನಿರುದ್ಯೋಗ ಸಮಸ್ಯೆಗಳನ್ನು ಬಗೆಹರಿಸಲು ಸರ್ಕಾರ ದೂರದೃಷ್ಟಿ ಹೊಂದಿದೆ ಎಂದು ಕುಮಾರಸ್ವಾಮಿ ಭರವಸೆ ನೀಡಿದರು.
ಹೈ.ಕ. ಭಾಗದ ಎಲ್ಲ ಜಿಲ್ಲೆಗಳಲ್ಲಿ ಅವಶ್ಯಕವಿರುವ ಶಾಲಾ ಕೊಠಡಿಗಳ ಮಾಹಿತಿಯನ್ನು ಪಡೆಯಲಾಗಿದೆ. ಮುಂದಿನ 8-10 ದಿನಗಳಲ್ಲಿ ಸಭೆ ಕರೆದು ಎಲ್ಲ ಶಾಲೆಗಳ ದುರಸ್ತಿ, ಹೆಚ್ಚುವರಿ ಕಟ್ಟಡ ಮತ್ತು ಶಿಕ್ಷಕರ ಕೊರತೆ ನೀಗಿಸುವಲ್ಲಿ ಸೂಕ್ತ ನಿರ್ದೇಶನ ನೀಡಲಾಗುವುದು .ಹೈ.ಕ. ಭಾಗದಲ್ಲಿ ಗುಣಮಟ್ಟದ ಶಿಕ್ಷಣ ಸಿಗುವ ಹಾಗೆ ಕ್ರಮ ಕೈಗೊಳ್ಳಲಾಗುವುದು. ಈ ವರ್ಷ ಬೇರೆ ಜಿಲ್ಲೆಗಳಿಗೆ ಹೋಲಿಕೆಯಾಗುವ ಹಾಗೆ ಹೈ.ಕ. ಭಾಗದ ಜಿಲ್ಲೆಯ ಫಲಿತಾಂಶವೂ ಹೆಚ್ಚಿಸುವಲ್ಲಿ ಅಗತ್ಯ ಕ್ರಮ ಜರುಗಿಸಲಾಗುವುದು ಎಂದರು.
ಈ ಹಿಂದೆ ಕಲಬುರಗಿ ಜಿಲ್ಲೆಯ ಹೇರೂರ ಬಿ. ಗ್ರಾಮದಲ್ಲಿ ನಿಗದಿಯಾಗಿದ್ದ ಗ್ರಾಮ ವಾಸ್ತವ್ಯ ಕಾರ್ಯಕ್ರಮವು ಮಳೆಯಿಂದಾಗಿ ಮುಂದೂಡಲ್ಪಟ್ಟಿತ್ತು, ಈ ಗ್ರಾಮದಲ್ಲಿ ಸುಮಾರು 500 ಕೋಟಿ ರೂ. ಗಳ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಈಗಾಗಲೇ ಅನುದಾನ ಬಿಡುಗಡೆ ಮಾಡಲಾಗಿದ್ದು, ಗ್ರಾಮದ ಅಭಿವೃದ್ಧಿಗೆ ಕ್ರಮ ಜರುಗಿಸಲಾಗಿದೆ. ಗ್ರಾಮ ವಾಸ್ತವ್ಯ ಮಾಡುವ ಹಳ್ಳಿಗಳಲ್ಲದೆ ಎಲ್ಲ ಹಳ್ಳಿಗಳಲ್ಲಿಯೂ ಮೂಲ ಭೂತ ಸೌಲಭ್ಯ ಕಲ್ಪಿಸಲು ಅಗತ್ಯ ಕ್ರಮ ಜರುಗಿಸಲಾಗುವುದು ಎಂದು ಭರವಸೆ ನೀಡಿದರು. 
ಗ್ರಾಮ ವಾಸ್ತವ್ಯದ ಮೂಲಕ ಮೈತ್ರಿ ಸರಕಾರವನ್ನು ಜನರ ಹತ್ತಿರಕ್ಕೆ ಕರೆದುಕೊಂಡು ಹೋಗಲು ಪ್ರಯತ್ನಿಸಲಾಗುತ್ತಿದೆ, ಈಗಾಗಲೇ ಎರಡು ಗ್ರಾಮ ವಾಸ್ತವ್ಯಗಳು ಪೂರ್ಣಗೊಂಡಿವೆ ಎಂದರು.
ಬೀದರ್‌ನ ಬಸವಕಲ್ಯಾಣದ ಉಜಳಂಬ ಗ್ರಾಮದಲ್ಲಿ ಇಂದು ಕುಮಾರಸ್ವಾಮಿ ಗ್ರಾಮವಾಸ್ತವ್ಯ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com