ಸಾರಿಗೆ ನಿಗಮಗಳು ಖರೀದಿಸುವ ಡೀಸೆಲ್ ಮೇಲೆ ರಾಜ್ಯ ಸರ್ಕಾರ ವಿಧಿಸುವ ಸುಂಕವನ್ನು ಶೇಕಡಾ 50ರಷ್ಟು ಕಡಿಮೆ ಮಾಡಬೇಕು, ನಾಲ್ಕೂ ಸಾರಿಗೆ ನಿಗಮಗಳನ್ನು ಒಂದು ಮಾಡಬೇಕು ಎಂದು ಒತ್ತಾಯಿಸಿದ ಅವರು, ನಾಲ್ಕೂ ಸಾರಿಗೆ ನಿಗಮಗಳ ವಾಹನಗಳಿಗೆ ಹೆದ್ದಾರಿ ಸುಂಕ ರದ್ದು ಪಡಿಸಬೇಕು, ನಿಗಮಗಳ ನೌಕರರ ವೇತನವನ್ನು ಸರ್ಕಾರವೇ ಪಾವತಿಸಬೇಕು, ನಾಲ್ಕೂ ಸಾರಿಗೆ ನಿಗಮಗಳ ವಾಹನಗಳಿಗೆ ಮೋಟಾರ್ ವಾಹನ ತೆರಿಗೆಯನ್ನು ರದ್ದುಪಡಿಸಬೇಕು, 4 ನಿಗಮಗಳಿಗೆ ವಾರ್ಷಿಕ ಒಂದು ಸಾವಿರ ಕೋಟಿ ರೂಪಾಯಿ ಅನುದಾನ ನೀಡಬೇಕು ಎಂದು ಒತ್ತಾಯಿಸಿದರು.