ಜನತಾ ದರ್ಶನದಲ್ಲಿ ನಕಲಿ ದಾಖಲೆ ಸಲ್ಲಿಸಿ, ಪರಿಹಾರಕ್ಕೆ ಅರ್ಜಿ; ಇಬ್ಬರ ವಿರುದ್ಧ ಪ್ರಕರಣ ದಾಖಲು

ಮುಖ್ಯಮಂತ್ರಿಗಳ ಜನತಾ ದರ್ಶನದಲ್ಲಿ ನಕಲಿ ವೈದ್ಯಕೀಯ ದಾಖಲೆಗಳೊಂದಿಗೆ ನೆರವಿಗಾಗಿ ಅರ್ಜಿ ಸಲ್ಲಿಸಿದ್ದ ಇಬ್ಬರ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ.
ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ
ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ
Updated on

ಬೆಂಗಳೂರು: ಮುಖ್ಯಮಂತ್ರಿಗಳ ಜನತಾ ದರ್ಶನದಲ್ಲಿ ನಕಲಿ ವೈದ್ಯಕೀಯ ದಾಖಲೆಗಳೊಂದಿಗೆ ನೆರವಿಗಾಗಿ ಅರ್ಜಿ ಸಲ್ಲಿಸಿದ್ದ ಇಬ್ಬರ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ.

ಫೆಬ್ರುವರಿ 20 ರಂದು ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಹಮ್ಮಿಕೊಳ್ಳಲಾಗಿದ್ದ ಜನತಾದರ್ಶನದಲ್ಲಿ  ಚನ್ನಪ್ಪ ಹಾಗೂ ಸುನಂದಮ್ಮ ಎಂಬವವರು ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ನೆರವು ಒದಗಿಸುವಂತೆ ಮನವಿ ಸಲ್ಲಿಸಿದ್ದರು.
ಈ ಅರ್ಜಿಗಳನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿ ಶಾಖೆಯ ಕಚೇರಿ ಸಿಬ್ಬಂದಿ ಪರಿಶೀಲಿಸಿದಾಗ ಅವರು ಲಗತ್ತಿಸಿರುವ ಮಣಿಪಾಲ್ ಆಸ್ಪತ್ರೆಯ ವೈದ್ಯಕೀಯ ದಾಖಲೆಗಳು ಮೇಲ್ನೋಟಕ್ಕೇ ನಕಲಿ ಎಂದು ಕಂಡು ಬಂದಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com