ವೈದ್ಯಕೀಯ ಪಿಜಿ ಸೀಟು; ರಾಜ್ಯದ ವಿದ್ಯಾರ್ಥಿಗಳಿಗೆ ಶೇ.50ರಷ್ಟು ಮೀಸಲಾತಿ

ರಾಜ್ಯದಲ್ಲಿ ವೈದ್ಯಕೀಯ ಸ್ನಾತಕೋತ್ತರ ಸೀಟುಗಳ ಆಕಾಂಕ್ಷಿಗಳಿಗೆ ಸಮಾಧಾನದ ಸುದ್ದಿಯಿದೆ, ರಾಜ್ಯ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಬೆಂಗಳೂರು; ರಾಜ್ಯದಲ್ಲಿ ವೈದ್ಯಕೀಯ ಸ್ನಾತಕೋತ್ತರ ಸೀಟುಗಳ ಆಕಾಂಕ್ಷಿಗಳಿಗೆ ಸಮಾಧಾನದ ಸುದ್ದಿಯಿದೆ, ರಾಜ್ಯ ವೈದ್ಯಕೀಯ ಶಿಕ್ಷಣ ಇಲಾಖೆ ರಾಜ್ಯದ ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ಮುಕ್ತ ವಿಭಾಗದಲ್ಲಿ ಕರ್ನಾಟಕದ ವಿದ್ಯಾರ್ಥಿಗಳಿಗೆ ಸೀಟುಗಳನ್ನು ಮೀಸಲಿಡಲು ನಿರ್ಧರಿಸಿದೆ.
ವೈದ್ಯಕೀಯ ಸ್ನಾತಕೋತ್ತರ ಸೀಟುಗಳಿಗಿರುವ ಬೇಡಿಕೆಗಳನ್ನು ಪರಿಗಣಿಸಿ ವೈದ್ಯಕೀಯ ಶಿಕ್ಷಣ ಇಲಾಖೆ ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಗಳ ಪ್ರವೇಶ ನಿಯಮಕ್ಕೆ ತಿದ್ದುಪಡಿ ತಂದಿದ್ದು ಅದರಲ್ಲಿ ಶೇಕಡಾ 50ರಷ್ಟು ಮೀಸಲಾತಿಯನ್ನು ಮುಕ್ತ ವಿಭಾಗದಲ್ಲಿ ಕರ್ನಾಟಕದ ವಿದ್ಯಾರ್ಥಿಗಳಿಗೆ ನೀಡಲಾಗುತ್ತದೆ. ನಾಳೆ ಇಲಾಖೆ ಈ ಸಂಬಂಧ ಪ್ರವೇಶ ಅಧಿಸೂಚನೆಯನ್ನು ಹೊರಡಿಸಲಿದೆ.
ವೈದ್ಯಕೀಯ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಮಾತನಾಡಿ, ಮುಕ್ತ ವಿಭಾಗದಲ್ಲಿ ಹೊರ ರಾಜ್ಯದ ವಿದ್ಯಾರ್ಥಿಗಳಿಗೆ ಅವಕಾಶ ನೀಡಿದರೆ ರಾಜ್ಯದ ವಿದ್ಯಾರ್ಥಿಗಳಿಗೆ ಅವಕಾಶ ಕಡಿಮೆಯಾಗುತ್ತದೆ. ಇದಕ್ಕಾಗಿ ರಾಜ್ಯದ ವಿದ್ಯಾರ್ಥಿಗಳಿಗೆ ಶೇಕಡಾ 50ರಷ್ಟು ಮೀಸಲಾತಿ ತರಲಾಗುತ್ತಿದೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com