ಆನಂದ್ ಸಿಂಗ್
ಆನಂದ್ ಸಿಂಗ್

ಅಕ್ರಮ ಗಣಿಗಾರಿಕೆ: ಶಾಸಕ ಆನಂದ್‍ ಸಿಂಗ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

ಅಕ್ರಮ ಅದಿರು ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯನಗರ ಶಾಸಕ ಆನಂದ್ ಸಿಂಗ್ ವಿರುದ್ಧ ನಗರದ ಜನಪ್ರತಿನಿಧಿಗಳ ವಿರುದ್ಧ ಕ್ರಿಮಿನಲ್‍ ಪ್ರಕರಣಗಳ....
ಬೆಂಗಳೂರು: ಅಕ್ರಮ ಅದಿರು ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯನಗರ ಶಾಸಕ ಆನಂದ್ ಸಿಂಗ್ ವಿರುದ್ಧ ನಗರದ ಜನಪ್ರತಿನಿಧಿಗಳ ವಿರುದ್ಧ ಕ್ರಿಮಿನಲ್‍ ಪ್ರಕರಣಗಳ ವಿಚಾರಣಾ ನ್ಯಾಯಾಲಯ ಜಾಮೀನು ರಹಿತ ಬಂಧನ ವಾರಂಟ್ ಜಾರಿ ಮಾಡಿದೆ.
ಇಂದು ಪ್ರಕರಣದ ಪ್ರಮುಖ ಆರೋಪಿಗಳಾದ ಜನಾರ್ದನ ರೆಡ್ಡಿ, ಅಲಿಖಾನ್, ನಾಗೇಂದ್ರ ಹಾಗೂ ಸುರೇಶ್ ಬಾಬು ವಿಚಾರಣೆಗೆ ಹಾಜರಾಗಿದ್ದರು. ಆದರೆ, ಆನಂದ್ ಸಿಂಗ್ ಗೈರು ಹಾಜರಾಗಿದ್ದರು.
ವಿಚಾರಣೆ ವೇಳೆ,  ಆನಂದ ಸಿಂಗ್ ಪರ ವಕೀಲರು, ಖುದ್ದು ಹಾಜರಾತಿಯಿಂದ ವಿನಾಯಿತಿ ಕೋರಿ ಅರ್ಜಿ ಸಲ್ಲಿಸಿದರು. 
ಇತ್ತೀಚೆಗೆ ರೆಸಾರ್ಟ್‌ ನಲ್ಲಿ ಕಂಪ್ಲಿ ಶಾಸಕ ಗಣೇಶ್ ಅವರು ಹಲ್ಲೆ ನಡೆಸಿದ್ದರಿಂದ ಆನಂದ್ ಸಿಂಗ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರು ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದ್ದರಿಂದ ಹಾಜರಾತಿಗೆ ವಿನಾಯಿತಿ ನೀಡಬೇಕು ಎಂದು ಮನವಿ ಮಾಡಿದರು. ಜೊತೆಗೆ,  ವೈದ್ಯಕೀಯ ದಾಖಲೆಗಳನ್ನು ಸಲ್ಲಿಸಿದರು.
ಆದರೆ, ಹಲ್ಲೆ ಪ್ರಕರಣಕ್ಕೂ ಮುನ್ನ ಆನಂದ್‍ ಸಿಂಗ್ ಅವರು ವಿಚಾರಣೆಗೆ ಗೈರು ಹಾಜರಾಗಿದ್ದನ್ನು ಉಲ್ಲೇಖಿಸಿದ ನ್ಯಾಯಾಧೀಶರು, ಇದಕ್ಕೇನು ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿ, ಜಾಮೀನು ರಹಿತ ಬಂಧನದ ವಾರಂಟ್ ಜಾರಿ ಮಾಡುವಂತೆ ಆದೇಶಿಸಿದರು.

Related Stories

No stories found.

Advertisement

X
Kannada Prabha
www.kannadaprabha.com