ಮಾತೆ ಮಹಾದೇವಿ
ಮಾತೆ ಮಹಾದೇವಿ

ಮಾತೆ ಮಹಾದೇವಿ ಆರೋಗ್ಯ ಸ್ಥಿತಿ ಗಂಭೀರ: ಮಣಿಪಾಲ್ ಆಸ್ಪತ್ರೆ ಪ್ರಕಟಣೆ

ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿರುವ.ಜಗದ್ಗುರು ಮಾತೆ ಮಹಾದೇವಿ ಅವರ ಪರಿಸ್ಥಿತಿ ಗಂಭೀರವಾಗಿದ್ದು, ವೆಂಟಿಲೇಟರ್ ಮೂಲಕ ಉಸಿರಾಡುತ್ತಿದ್ದಾರೆ ಎಂದು ಮಣಿಪಾಲ ಆಸ್ಪತ್ರೆಯ ಪ್ರಕಟಣೆ...
ಬೆಂಗಳೂರು: ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿರುವ.ಜಗದ್ಗುರು ಮಾತೆ ಮಹಾದೇವಿ ಅವರ ಪರಿಸ್ಥಿತಿ ಗಂಭೀರವಾಗಿದ್ದು, ವೆಂಟಿಲೇಟರ್ ಮೂಲಕ ಉಸಿರಾಡುತ್ತಿದ್ದಾರೆ ಎಂದು ಮಣಿಪಾಲ ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ. 
74 ವರ್ಷದ ಮಾತೆ ಮಹಾದೇವಿ ಅವರು ದೀರ್ಘಕಾಲದಿಂದ ಮಧುಮೇಹ, ಗಂಭೀರ ಶ್ವಾಸಕೋಶ  ಹಾಗೂ ಮೂತ್ರಪಿಂಡದ ಸಮಸ್ಯೆ ಎದುರಿಸುತ್ತಿದ್ದಾರೆ. ಬಹು ಅಂಗಾಂಗ ವೈಫಲ್ಯದಿಂದ ಮಾ.8ರಂದು ಅವರು ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದು, ತುರ್ತು ನಿಗಾ ಘಟಕದಲ್ಲಿದ್ದಾರೆ. ಅಂದಿನಿಂದ  ಕೇವಲ ಜೀವರಕ್ಷಕ ಉಪಕರಣಗಳ ನೆರವಿನಿಂದ ಉಸಿರಾಡುತ್ತಿದ್ದಾರೆ. 
ಮಾತೆಯವರಿಗೆ ನಿರಂತರವಾಗಿ ಆ್ಯಂಟಿ ಬಯೋಟಿಕ್ಸ್ ಔಷಧ ಪೂರೈಸಲಾಗುತ್ತಿದೆ. ತುರ್ತು ನಿಗಾ ಘಟಕ, ಮೂತ್ರಪಿಂಡ ಹಾಗೂ ಶ್ವಾಸಕೋಶ ತಜ್ಞರ ತಂಡ ದಿನದ 24 ಗಂಟೆಗಳ ಕಾಲ ಚಿಕಿತ್ಸೆಯಲ್ಲಿ ನಿರತವಾಗಿದೆ. ಸದ್ಯ ಅವರ ಪರಿಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆಯ ಅಧ್ಯಕ್ಷ ಡಾ.ಎಚ್.ಸುದರ್ಶನ್‍ ಬಲ್ಲಾಳ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com