ಐಟಿ ದಾಳಿ: ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಸಚಿವರ ಆಪ್ತನ ರೂಂನಲ್ಲಿ ಕೋಟಿ ಕೋಟಿ ಹಣ!

ಲೋಕಸಭೆ ಚುನಾವಣೆಗೆ ದಿನಾಂಕ ಘೋಷಣೆಯಾದ ಬೆನ್ನಲ್ಲೇ ರಾಜಕೀಯ ಪಕ್ಷಗಳು ಭರ್ಜರಿ ಕ್ಯಾಂಪೇನ್ ನಡೆಸುತ್ತಿದ್ದರೆ ಇತ್ತ ಐಟಿ ಅಧಿಕಾರಿಗಳು ಅಕ್ರಮದಲ್ಲಿ ತೊಡಗಿರುವವ ಬೆನ್ನಿಗೆ ಬಿದ್ದಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಬೆಂಗಳೂರು: ಲೋಕಸಭೆ ಚುನಾವಣೆಗೆ ದಿನಾಂಕ ಘೋಷಣೆಯಾದ ಬೆನ್ನಲ್ಲೇ ರಾಜಕೀಯ ಪಕ್ಷಗಳು ಭರ್ಜರಿ ಕ್ಯಾಂಪೇನ್ ನಡೆಸುತ್ತಿದ್ದರೆ ಇತ್ತ ಐಟಿ ಅಧಿಕಾರಿಗಳು ಅಕ್ರಮದಲ್ಲಿ ತೊಡಗಿರುವವ ಬೆನ್ನಿಗೆ ಬಿದ್ದಿದ್ದಾರೆ.
ಗ್ರಾಮೀಣಾಭಿವೃದ್ಧಿ ಇಲಾಖೆಯ ಎಕ್ಸಿಕ್ಯೂಟಿವ್ ಇಂಜಿನಿಯರ್ ನಾರಾಯಣಗೌಡ ಪಾಟೀಲ್ ಗುತ್ತಿಗೆದಾರರಿಂದ ಕಂತೆ ಕಂತೆ ಹಣ ಪಡೆಯುತ್ತಿದ್ದಾಗ ಐಟಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಇನ್ನು ಬೆಂಗಳೂರಿನ ಆನಂದ್ ರಾವ್ ಸರ್ಕಲ್ ನಲ್ಲಿರುವ ಖಾಸಗಿ ಹೋಟೆಲ್ ನಲ್ಲಿ ಗುತ್ತಿಗೆದಾರರಿಂದ ಪಡೆದಿದ್ದ ಸುಮಾರು 2 ಕೋಟಿ ರುಪಾಯಿಯನ್ನು 2 ಕೋಣೆಗಳಲ್ಲಿ ಸಂಗ್ರಹಿಸಿಟ್ಟಿದ್ದರು. ಅಲ್ಲದೇ ಈ ಕಲೆಕ್ಷನ್ ರಾಜಕಾರಣಿಗಳಿಗೆ ಚುನಾವಣೆ ಖರ್ಚಿಗೆಂದು ಮಾಡಲಾಗುತ್ತಿತ್ತು ಎಂಬ ಮಾಹಿತಿಯೂ ಲಭ್ಯವಾಗಿದೆ. 
ಗ್ರಾಮೀಣಾಭಿವೃದ್ಧಿ ಅಧಿಕಾರಿಯ ಮೇಲೆ ಕಣ್ಣಿಟ್ಟಿದ್ದ ಐಟಿ ಅಧಿಕಾರಿಗಳು ಬೆಂಗಳೂರು ಮತ್ತು ಹಾವೇರಿಯಲ್ಲಿ ಏಕಕಾಲಕ್ಕೆ ದಾಳಿ ನಡೆಸಿದ್ದು ಬೆಂಗಳೂರಿನಲ್ಲಿ 2 ಕೋಟಿ ಹಾಗೂ ಹಾವೇರಿಯಲ್ಲಿ 25 ಲಕ್ಷ ರೂಪಾಯಿಗೂ ಹೆಚ್ಚು ನಗದು ಸಿಕ್ಕಿದೆ.
ಐಟಿ ದಾಳಿಯ ಸುಳಿವು ಸಿಗುತ್ತಿದ್ದಂತೆ ಹೊಟೇಲ್ ನಲ್ಲಿದ್ದ ನಾರಾಯಣಗೌಡ ಪರಾರಿಯಾಗಿದ್ದಾರೆ ಆದರೆ ಅವರ ಕಾರು ಚಾಲಕನನ್ನು ಅಧಿಕಾರಿಗಳು ಬಂಧಿಸಿದ್ದಾರೆ. ಇನ್ನು ತನ್ನ ಇಲಾಖೆಯ ಅಧಿಕಾರಿ ಬಳಿ ಪತ್ತೆಯಾದ ಹಣದ ಕುರಿತು ಗ್ರಾಮೀಣಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡರು ಏನಂತಾರೆ ಎಂಬುದನ್ನು ಕಾದು ನೋಡಬೇಕಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com