ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಅವರನ್ನು ಗುರುವಾರ ಕೆಲ ಕಾಲ ಪೊಲೀಸ್ ವಶಕ್ಕೆ ನೀಡಿದ್ದ ನಗರದ ಜನಪ್ರತಿನಿಧಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣ ವಿಚಾರಣಾ ನ್ಯಾಯಾಲಯ, ನಂತರ 100 ರೂ. ದಂಡ ಪಾವತಿಸಿಕೊಂಡು ಅವರನ್ನು ಬಿಡುಗಡೆ ಮಾಡಿದೆ. ಜೊತೆಗೆ, ಇನ್ನು ಮುಂದೆ ನ್ಯಾಯಾಲಯದ ಆದೇಶಗಳನ್ನು ನಿರ್ಲಕ್ಷಿಸದಂತೆ ಎಚ್ಚರಿಕೆಯನ್ನೂ ನೀಡಿದೆ.