ಎಚ್.ವಿಶ್ವನಾಥ್
ರಾಜ್ಯ
ಜೆಡಿಎಸ್ ರಾಜ್ಯಾಧ್ಯಕ್ಷ ಎಚ್. ವಿಶ್ವನಾಥ್ ಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು
ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಅವರಿಗೆ ಲಘು ಹೃದಯಾಘಾತ ಸಂಭವಿಸಿದ್ದು, ಅವರನ್ನು ಹೈದ್ರಾಬಾದ್ ನ ಓಜೋನ್ ಆಸ್ಪತ್ರೆಗೆ ದಾಖಲಿಸಲಾಗಿದೆ....
ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಅವರಿಗೆ ಲಘು ಹೃದಯಾಘಾತ ಸಂಭವಿಸಿದ್ದು, ಅವರನ್ನು ಹೈದ್ರಾಬಾದ್ ನ ಓಜೋನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ನಿನ್ನೆ ಮಾ.16ರಂದು ಹೈದ್ರಾಬಾದ್ ನಲ್ಲಿ ಕುರುಬ ಸಮಾವೇಶ ಆಯೋಜಿಸಲಾಗಿತ್ತು. ಈ ಸಮಾವೆಶದಲ್ಲಿ ಪಾಲ್ಗೊಳ್ಳಲು ತೆರಳಿದ್ದಾಗ ಲಘು ಹೃದಯಾಘಾತ ಸಂಭವಿಸಿದೆ.
ಹೆಚ್ಚಿನ ಚಿಕಿತ್ಸೆಗಾಗಿ ಏರ್ ಆ್ಯಂಬುಲೆನ್ಸ್ ಮೂಲಕ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ವಿಶ್ವನಾಥ್ ರನ್ನು ಕರೆತರಲು ಸಿದ್ಧತೆಯನ್ನೂ ನಡೆಸಲಾಗಿದೆ. ಆದರೆ ಪರಿಸ್ಥಿತಿ ನೋಡಿಕೊಂಡು ಬೆಂಗಳೂರಿಗೆ ಕರೆ ತರಲಾಗುವುದು ಎಂದು ಎಂದು ಹೇಳಲಾಗಿದೆ. ಓಜೋನ್ ಆಸ್ಪತ್ರೆ ವೈದ್ಯರೊಂದಿಗೆ ಬೆಂಗಳೂರಿನ ಜಯದೇವ ಆಸ್ಪತ್ರೆ ನಿರ್ದೇಶಕ ಡಾ.ಸಿ.ಎನ್ ಮಂಜುನಾಥ್ ನಿರಂತರ ಸಂಪರ್ಕದಲ್ಲಿದ್ದಾರೆ ಎಂದು ಹೇಳಲಾಗಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ