ಪ್ರಶ್ನೆಪತ್ರಿಕೆ ಕಬ್ಬಿಣದ ಕಡಲೆಯಾಗಿತ್ತು ಎಂದು ವಿದ್ಯಾರ್ಥಿಗಳ ಅಳಲು; ಪಿಯುಸಿ ಜೀವ ವಿಜ್ಞಾನದಲ್ಲಿ ಗ್ರೇಸ್ ಅಂಕ?

ಕಳೆದ ಗುರುವಾರ ನಡೆದ ದ್ವಿತೀಯ ಪಿಯುಸಿ ಜೀವ ವಿಜ್ಞಾನ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು ...
ಪದವಿ ಪೂರ್ವ ಶಿಕ್ಷಣ ಇಲಾಖೆ
ಪದವಿ ಪೂರ್ವ ಶಿಕ್ಷಣ ಇಲಾಖೆ
ಬೆಂಗಳೂರು: ಕಳೆದ ಗುರುವಾರ ನಡೆದ ದ್ವಿತೀಯ ಪಿಯುಸಿ ಜೀವ ವಿಜ್ಞಾನ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು ನೀಡಿದ ದೂರಿನ ಆಧಾರದ ಮೇಲೆ ಪದವಿ ಪೂರ್ವ ಶಿಕ್ಷಣ ಇಲಾಖೆ ಮೂವರು ಸದಸ್ಯರನ್ನೊಳಗೊಂಡ ಸಮಿತಿಯನ್ನು ನೇಮಿಸಿದೆ.
ಮೊನ್ನೆ ನಡೆದ ಬಯಾಲಜಿ ಪರೀಕ್ಷೆ ತುಂಬಾ ಕಷ್ಟಕರವಾಗಿತ್ತು ಎಂದು ವಿದ್ಯಾರ್ಥಿಗಳು ದೂರು ನೀಡಿದ್ದರು. ಹೀಗಾಗಿ ತಜ್ಞರ ಸಮಿತಿ ನೇಮಿಸಿದ್ದು ಅವರು ಪ್ರಶ್ನೆಪತ್ರಿಕೆ ನಿಜಕ್ಕೂ ಕಷ್ಟಕರವಾಗಿತ್ತು ಎಂದು ಹೇಳಿದರೆ ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದು ಎಂದು ಶಿಕ್ಷಣ ಇಲಾಖೆ ಹೇಳಿದೆ.
ಶಿಕ್ಷಣ ಇಲಾಖೆಯ ಸಹಾಯವಾಣಿ ಮತ್ತು ಇಮೇಲ್ ಮೂಲಕ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರಿಗೆ ರಾಜ್ಯದ ಹಲವು ಜಿಲ್ಲೆಗಳಿಂದ ವಿದ್ಯಾರ್ಥಿಗಳು ದೂರು ನೀಡಿದ್ದು ನೀಟ್ ಪರೀಕ್ಷೆಗಿಂತಲೂ ಬಯಾಲಜಿ ಪರೀಕ್ಷೆ ಕಷ್ಟವಾಗಿತ್ತು ಎಂದಿದ್ದಾರೆ. ಈ ಹಿನ್ನಲೆಯಲ್ಲಿ ಆಯುಕ್ತರು ನಿನ್ನೆ ತಜ್ಞರ ಸಮಿತಿ ರಚಿಸಿದ್ದು ಸಮಿತಿ ಸದಸ್ಯರು ಪ್ರಶ್ನೆಪತ್ರಿಕೆ ನಿಜಕ್ಕೂ ಕಷ್ಟವಾಗಿತ್ತು ಎಂದು ಹೇಳಿದರೆ ಮಕ್ಕಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದು ಎಂದು ಹೇಳಿದೆ.
ರಾಜ್ಯದ ಗ್ರಾಮೀಣ ಪ್ರದೇಶಗಳ ವಿದ್ಯಾರ್ಥಿಗಳು ಸಹಾಯವಾಣಿಗೆ ಕರೆ ಮಾಡಿ ಅಳುತ್ತಾ ತಮ್ಮ ಸಮಸ್ಯೆ ಹೇಳಿಕೊಂಡರು. ಪ್ರಶ್ನೆಪತ್ರಿಕೆ ಕಷ್ಟವಾಗಿತ್ತು ಎಂಬುದೇ ಅವರ ಪ್ರಮುಖ ಅಳಲಾಗಿತ್ತು ಎಂದು ಇಲಾಖೆಯ ಅಧಿಕಾರಿಯೊಬ್ಬರು ಹೇಳುತ್ತಾರೆ. ನಾವಿದನ್ನು ಆಯುಕ್ತರ ಗಮನಕ್ಕೆ ತಂದಿದ್ದೇವೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com