ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಏಪ್ರಿಲ್ ನಲ್ಲಿಯೇ ಎಸ್ಎಸ್ಎಲ್ ಸಿ, ಪಿಯುಸಿ ಫಲಿತಾಂಶ ಪ್ರಕಟ: ಶಿಕ್ಷಣ ಇಲಾಖೆ

ದ್ವಿತೀಯ ಪಿಯುಸಿ ಮತ್ತು ಎಸ್ಎಸ್ಎಲ್ ಸಿ ಪರೀಕ್ಷೆ ಫಲಿತಾಂಶ ಈ ಬಾರಿ ಏಪ್ರಿಲ್ ನಲ್ಲಿಯೇ ...
Published on
ಬೆಂಗಳೂರು: ದ್ವಿತೀಯ ಪಿಯುಸಿ ಮತ್ತು ಎಸ್ಎಸ್ಎಲ್ ಸಿ ಪರೀಕ್ಷೆ ಫಲಿತಾಂಶ ಈ ಬಾರಿ ಏಪ್ರಿಲ್ ನಲ್ಲಿಯೇ ಪ್ರಕಟವಾಗಲಿದೆ.
ಸಾಮಾನ್ಯವಾಗಿ ಪ್ರತಿವರ್ಷ ಮೇ ತಿಂಗಳಲ್ಲಿ ಹತ್ತನೇ ತರಗತಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗುತ್ತದೆ. ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ವಿದ್ಯಾರ್ಥಿಗಳಿಗೆ ಫಲಿತಾಂಶ ಬಂದ ನಂತರ ತೊಂದರೆಯಾಗುವುದರಿಂದ ಈ ಬಾರಿ ಏಪ್ರಿಲ್ ನಲ್ಲಿಯೇ ಫಲಿತಾಂಶ ಪ್ರಕಟಿಸಲು ನಿರ್ಧರಿಸಲಾಗಿದೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕ ಪಿ ಸಿ ಜಾಫರ್ ತಿಳಿಸಿದ್ದಾರೆ.
ಇಲಾಖೆಯ ಅಧಿಕೃತ ಮಾಹಿತಿ ಪ್ರಕಾರ, ಏಪ್ರಿಲ್ ತಿಂಗಳ ಎರಡನೇ ವಾರದಲ್ಲಿ ಪಿಯುಸಿ ಮತ್ತು ಎಸ್ಎಸ್ಎಲ್ ಸಿ ಫಲಿತಾಂಶ ಏಪ್ರಿಲ್ ಕೊನೆ ವಾರದಲ್ಲಿ ಪ್ರಕಟವಾಗಲಿದೆ.
ದ್ವಿತೀಯ ಪಿಯುಸಿ ಉತ್ತರ ಪತ್ರಿಕೆ ಮೌಲ್ಯಮಾಪನ ಇದೇ 25ರಿಂದ ಮತ್ತು ಹತ್ತನೇ ತರಗತಿ ಮೌಲ್ಯಮಾಪನ ಏಪ್ರಿಲ್ 10ರಿಂದ ಆರಂಭವಾಗಲಿದೆ. ಎಸ್ಎಸ್ಎಲ್ ಸಿ ಮೌಲ್ಯಮಾಪನ ಸಂದರ್ಭದಲ್ಲಿ ಸಂಸತ್ತು ಚುನಾವಣೆಯಿರುವುದರಿಂದ ಮೌಲ್ಯಮಾಪನವನ್ನು ಮೂರು ದಿನಗಳ ಕಾಲ ವಿಸ್ತರಿಸಲಾಗಿದೆ. ಎರಡನೇ ಹಂತದ ಚುನಾವಣೆ ಮುಗಿದ ಎರಡು ದಿನಗಳಲ್ಲಿ ಮೌಲ್ಯಮಾಪನವನ್ನು ಮುಗಿಸಿ ಏಪ್ರಿಲ್ ಕೊನೆಯ ಹೊತ್ತಿಗೆ ಫಲಿತಾಂಶ ಪ್ರಕಟಿಸಲಾಗುವುದು ಎಂದು ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ತಿಳಿಸಿದೆ.
ಈ ವರ್ಷ ಎಸ್ಎಸ್ಎಲ್ ಸಿ ಮೌಲ್ಯಮಾಪನ ಪ್ರಕ್ರಿಯೆ ಸಂಪೂರ್ಣವಾಗಿ ಆನ್ ಲೈನ್ ನಲ್ಲಿ ಇರಲಿದ್ದು, ಪಿಯುಸಿಗೆ ಆನ್ ಲೈನ್ ಮತ್ತು ಖುದ್ದು ಉಪನ್ಯಾಸಕರಿಂದ ಮೌಲ್ಯಮಾಪನವಿರುತ್ತದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com