ಬೆಂಗಳೂರು: ಈ ವರ್ಷ ರಾಜ್ಯದಲ್ಲಿ ಸುಮಾರು 10,500 ಎಸ್ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಹಾಜರಾತಿ ಕೊರತೆಯಿಂದ ಪರೀಕ್ಷೆ ಬರೆಯಲು ಸಾಧ್ಯವಾಗುತ್ತಿಲ್ಲ. ಸಾಕಷ್ಟು ಹಾಜರಾತಿ ಬೇಕು, ಇಲ್ಲದಿದ್ದರೆ ಪರೀಕ್ಷೆ ಬರೆಯಲು ಸಾಧ್ಯವಾಗುವುದಿಲ್ಲ ಎಂದು ಪದೇ ಪದೇ ಎಚ್ಚರಿಕೆ ನೀಡಿದ್ದರೂ ಕೂಡ ವಿದ್ಯಾರ್ಥಿಗಳು ನಿರ್ಲಕ್ಷಿಸಿದ್ದರು. ಎಸ್ಎಸ್ ಎಲ್ ಸಿ ಪರೀಕ್ಷೆ ಇದೇ 21ರಿಂದ ಆರಂಭವಾಗುತ್ತಿದೆ.