ಯಡಿಯೂರಪ್ಪ ಡೈರಿ ವಿಚಾರವಾಗಿ ಬಿಜೆಪಿ ನಾಯಕರು ವಿಭಿನ್ನ ಕಥೆ ಹೇಳುತ್ತಿದ್ದಾರೆ: ಡಿ.ಕೆ. ಶಿವಕುಮಾರ್

ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಪಕ್ಷದ ವಿವಿಧ ನಾಯಕರಿಗೆ ಒಟ್ಟು 1,800 ಕೋಟಿ ರೂಪಾಯಿ ಹಣ ನೀಡಿದ್ದಾರೆ ಎಂಬ ಆರೋಪಕ್ಕೆ ...
ಡಿ.ಕೆ ಶಿವಕುಮಾರ್
ಡಿ.ಕೆ ಶಿವಕುಮಾರ್
Updated on
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಪಕ್ಷದ ವಿವಿಧ ನಾಯಕರಿಗೆ ಒಟ್ಟು 1,800 ಕೋಟಿ ರೂಪಾಯಿ ಹಣ ನೀಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರು ತಮ್ಮದೇ ರೀತಿಯಲ್ಲಿ  ಒಂದೊಂದು ಕಥೆ ಹೇಳುತ್ತಿದ್ದಾರೆ ಎಂದು ಸಚಿವ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
'ಕೆಲವು ಬಿಜೆಪಿ ಮುಖಂಡರು ತಮಗೆ ಗೊತ್ತಿರುವ ಮಾಹಿತಿ ಆಧಾರದಲ್ಲಿ ತಮ್ಮದೇ ಹೇಳಿಕೆಗಳನ್ನು ನೀಡುತ್ತಿದ್ದಾರೆ. ನಾನು ಅದರ ಬಗ್ಗೆ ಮಾತನಾಡಲು ಬಯಸುವುದಿಲ್ಲ. ಸೂಕ್ತ ಸಂದರ್ಭದಲ್ಲಿ ನಾನು ಪ್ರತಿಕ್ರಿಯೆ ನೀಡುತ್ತೇನೆ. ಈ ವಿವಾದಕ್ಕೆ ಸಂಬಂಧಿಸಿದಂತೆ ಪಕ್ಷದ ಸದಸ್ಯರು ಇದುವರೆಗೂ ನನ್ನ ಬಳಿ ಮಾತನಾಡಿಲ್ಲ' ಎಂದು ಹೇಳಿದ್ದಾರೆ.
ಯಡಿಯೂರಪ್ಪ ಅವರ ಡೈರಿ ಪ್ರಕರಣದಲ್ಲಿ ಕಾಂಗ್ರೆಸ್ ಮಾಡಿರುವ ಆರೋಪಗಳಿಗೆ 2017ರ ಆಗಸ್ಟ್‌ನಲ್ಲಿ ಡಿ.ಕೆ. ಶಿವಕುಮಾರ್ ಅವರ ಆಸ್ತಿಪಾಸ್ತಿಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದ ಘಟನೆಯನ್ನು ಬಿಜೆಪಿ ಕೆದಕಿದ ಹಿನ್ನೆಲೆಯಲ್ಲಿ ಅವರು ಪ್ರತಿಕ್ರಿಯೆ ನೀಡಿದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com