ಸಂಗ್ರಹ ಚಿತ್ರ
ರಾಜ್ಯ
ಹಿರಿಯ ರಂಗಕರ್ಮಿ ಮಾಸ್ಟರ್ ಹಿರಣ್ಣಯ್ಯ ನಿಧನಕ್ಕೆ ಮುಖ್ಯಮಂತ್ರಿ ಸೇರಿ ಗಣ್ಯರ ಶೋಕ
ಹಿರಿಯ ರಂಗಕರ್ಮಿ ಮಾಸ್ಟರ್ ಹಿರಣ್ಣಯ್ಯ ಅವರ ನಿಧನಕ್ಕೆ ನಾಡಿನ ರಾಜಕೀಯ ನಾಯಕರು, ಗಣ್ಯರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು: ಹಿರಿಯ ರಂಗಕರ್ಮಿ ಮಾಸ್ಟರ್ ಹಿರಣ್ಣಯ್ಯ ಅವರ ನಿಧನಕ್ಕೆ ನಾಡಿನ ರಾಜಕೀಯ ನಾಯಕರು, ಗಣ್ಯರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.
ಮಾಸ್ಟರ್ ಹಿರಣ್ಣಯ್ಯ ಅವರ ನಿಧನದಿಂದ ರಂಗಭೂಮಿ ಒಂದು ಅಪೂರ್ವ ರತ್ನವನ್ನು ಕಳೆದುಕೊಂಡಂತಾಗಿದೆ ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಮಾಸ್ಟರ್ ಹಿರಣ್ಣಯ್ಯ ಅವರ ಲಂಚಾವತಾರ, ನಡುಬೀದಿ ನಾರಾಯಣ ಮೊದಲಾದ ನಾಟಕಗಳು ಜನಮಾನಸದಲ್ಲಿ ಹಚ್ಚ ಹಸಿರಾಗಿ ಉಳಿಯುವಂತವು. ಸಮಾಜದ ಪಿಡುಗುಗಳಿಗೆ ವಿಡಂಬನೆಯ ಚುಚ್ಚುಮದ್ದು ನೀಡುವುದು ಅವರ ವೈಶಿಷ್ಟ್ಯವಾಗಿತ್ತು ಎಂದು ಮುಖ್ಯಮಂತ್ರಿಗಳು ಸ್ಮರಿಸಿಕೊಂಡಿದ್ದಾರೆ.
ದಶಕಗಳ ಕಾಲ ವೃತ್ತಿ ರಂಗಭೂಮಿಯ ಕಾಯಕ ಮಾಡಿದ್ದ ಹಿರಿಯ ರಂಗಕರ್ಮಿ ಮಾಸ್ಟರ್ ಹಿರಣ್ಣಯ್ಯ ಅವರ ಅಗಲಿಕೆಯ ಸುದ್ದಿ ನೋವುಂಟು ಮಾಡಿದೆ. ಹಾಸ್ಯ, ಅಭಿನಯ, ಹರಿತ ಸಂಭಾಷಣೆ ಅವರ ವೈಶಿಷ್ಟ್ಯ. ಅವರ ಕುಟುಂಬ ಮತ್ತು ಅಭಿಮಾನಿಗಳ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ ಎಂದು ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ