ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಸಿಎಂ, 'ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಹರಿಸಲು ಮಹಾರಾಷ್ಟ್ರ ಸರ್ಕಾರ ಸಮ್ಮತಿಸಿದ್ದು ಇನ್ನೆರಡು ದಿನಗಳಲ್ಲಿ ನೀರು ಬರುವ ಸಾಧ್ಯತೆ ಇದೆ ಎಂದು ಮಹಾರಾಷ್ಟ್ರ ಸರ್ಕಾರ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಮಾಹಿತಿ ನೀಡಿದೆ. ತೀವ್ರ ಬರಗಾಲದಿಂದ ಕುಡಿಯುವ ನೀರಿನ ಅಭಾವ ಉಂಟಾಗಿರುವ ಹಿನ್ನೆಲೆಯಲ್ಲಿ ಕೊಯ್ನಾ ಜಲಾಶಯದಿಂದ ನೀರು ಬಿಡುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಮನವಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯದ ಮನವಿಗೆ ಸ್ಪಂದಿಸಿರುವ ಮಹಾರಾಷ್ಟ್ರ ಸರ್ಕಾರ ನೀರು ಹರಿಸಲು ಕ್ರಮ ಕೈಗೊಂಡಿದೆ ಎಂದು ಟ್ವೀಟ್ ಮಾಡಿದ್ದಾರೆ.