ಕಾಂಗ್ರೆಸ್ ಶಾಸಕರು ಸಿದ್ದರಾಮಯ್ಯನವರೇ ಮುಖ್ಯಮಂತ್ರಿ ಆಗಬೇಕು ಎಂಬ ಚರ್ಚೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಎಐಸಿಸಿ ಅಧ್ಯಕ್ಷರಾದ ರಾಹುಲ್ ಗಾಂಧಿ ಅವರು ಈ ಬಗ್ಗೆ ತೀರ್ಮಾನಿಸುತ್ತಾರೆ. ಲೋಕಸಭಾ ಚುನಾವಣೆ ಫಲಿತಾಂಶ ಬಳಿಕ ಸರ್ಕಾರಕ್ಕೆ ಏನೂ ಆಗಲ್ಲ, ಯಾರೂ ತಲೆಕೆಡಿಸಿಕೊಳ್ಳಬೇಡಿ. ಬಿಜೆಪಿ ನಾಯಕರಿಗೆ ರಾಜ್ಯದ ಅಭಿವೃದ್ಧಿ ಬೇಕಿಲ್ಲ. ಅವರಿಗೆ ಅಧಿಕಾರದ ದಾಹ ಹೆಚ್ಚಾಗಿದೆ. ಹಾಸನ, ಮಂಡ್ಯ, ತುಮಕೂರು ಕ್ಷೇತ್ರಗಳಲ್ಲಿ ನಾವೇ ಗೆಲ್ಲುತ್ತೇವೆ, ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು