ಕುರುಬರನ್ನು ಎಸ್ ಟಿಗೆ ಸೇರಿಸಲು ರಾಜ್ಯ ಸರ್ಕಾರ ಮುಂದು, ಅಧ್ಯಯನಕ್ಕೆ ಆದೇಶ

ರಾಜ್ಯ ಸರ್ಕಾರ ಕುರುಬ ಜನಾಂಗವನ್ನು ಪರಿಶಿಷ್ಟ ಪಂಗಡ(ಎಸ್ ಟಿ) ಪಟ್ಟಿಗೆ ಸೇರಿಸಲು ಮುಂದಾಗಿದ್ದು, ಈ ಸಂಬಂಧ ಕುಲಶಾಸ್ತ್ರೀಯ ಅಧ್ಯಯನ.....
ಮಾಜಿ ಸಿಎಂ ಸಿದ್ದರಾಮಯ್ಯ
ಮಾಜಿ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ರಾಜ್ಯ ಸರ್ಕಾರ ಕುರುಬ ಜನಾಂಗವನ್ನು ಪರಿಶಿಷ್ಟ ಪಂಗಡ(ಎಸ್ ಟಿ) ಪಟ್ಟಿಗೆ ಸೇರಿಸಲು ಮುಂದಾಗಿದ್ದು, ಈ ಸಂಬಂಧ ಕುಲಶಾಸ್ತ್ರೀಯ ಅಧ್ಯಯನ ಕೈಗೊಳ್ಳುವಂತೆ ಬುಡಕಟ್ಟು ಸಂಶೋಧನಾ ಸಂಸ್ಥೆಗೆ ಸೂಚಿಸಿದೆ.
ಕುರುಬ ಜನಾಂಗವನ್ನು ಎಸ್​ಟಿ ಪಟ್ಟಿಗೆ ಸೇರಿಸುವಂತೆ ಹಲವು ಸಂಘ-ಸಂಸ್ಥೆಗಳು ಮನವಿ ಸಲ್ಲಿಸಿದ್ದು, ಇದರ ಆಧಾರದಲ್ಲಿ ಕುಲಶಾಸ್ತ್ರೀಯ ಅಧ್ಯಯನ ಕಾರ್ಯಕೈಗೊಳ್ಳುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆಯಾಗಿತ್ತು. ಇದೀಗ ಅಧ್ಯಯನ ನಡೆಸಲು ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಗೆ ಸಮಾಜ ಕಲ್ಯಾಣ ಇಲಾಖೆ ಆದೇಶ ನೀಡಿದೆ.
ಕುರುಬ ಸಮಾಜದ ಆಚಾರ- ವಿಚಾರ, ಭಾಷೆ, ಸಾಮಾಜಿಕ- ಶೈಕ್ಷಣಿಕ- ಆರ್ಥಿಕ ಸ್ಥಿತಿಗತಿ, ಭೌಗೋಳಿಕ ಅಂಶಗಳ ಕುರಿತಂತೆ ಕುಲಶಾಸ್ತ್ರೀಯ ಅಧ್ಯಯನವನ್ನು ಕಲಬುರಗಿ, ಬೀದರ್, ಯಾದಗಿರಿ ಹೊರತುಪಡಿಸಿ ಇತರೆ ಜಿಲ್ಲೆಗಳಲ್ಲಿ ನಡೆಸಿ ವರದಿ ನೀಡುವಂತೆ ಸೂಚನೆ ನೀಡಲಾಗಿದೆ.
ಅಧ್ಯಯನಕ್ಕಾಗಿ 40 ಲಕ್ಷ ರೂ. ಮಂಜೂರು ಮಾಡಲಾಗಿದೆ. ಪ್ರಸ್ತುತ ಕುರುಬ ಜನಾಂಗ ಹಿಂದುಳಿದ ವರ್ಗಗಳ (2ಎ) ಅಡಿಯಲ್ಲಿ ಬರುತ್ತಿದ್ದು, ಶೇ.15 ರಷ್ಟು ಮೀಸಲು ಲಭ್ಯವಾಗುತ್ತಿದೆ. ಎಸ್ಟಿಗೆ ಸೇರಿಸುವುದರಿಂದ ಕುರುಬ ಜನಾಂಗಕ್ಕೆ ಹೆಚ್ಚಿನ ಪ್ರಾತಿನಿಧ್ಯ ಸಿಗಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com