ಕರ್ನಾಟಕ ಸರ್ಕಾರದ ಎಸ್‏ಸಿ, ಎಸ್‏ಟಿ ಬಡ್ತಿ ಮೀಸಲಾತಿ ಕಾಯ್ದೆಗೆ ಸುಪ್ರೀಂ ಕೋರ್ಟ್ ಅಸ್ತು

ಸರ್ಕಾರಿ ನೌಕರಿಯಲ್ಲಿ ಮೀಸಲಾತಿ ಆಧಾರದ ಮೇಲೆ ಬಡ್ತಿ ನೀಡುವ ರಾಜ್ಯ ಸರ್ಕಾರದ ಕಾಯ್ದೆಯನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿದೆ. ...
ಸುಪ್ರೀಂಕೋರ್ಟ್ (ಸಂಗ್ರಹ ಚಿತ್ರ)
ಸುಪ್ರೀಂಕೋರ್ಟ್ (ಸಂಗ್ರಹ ಚಿತ್ರ)
ನವದೆಹಲಿ: ಸರ್ಕಾರಿ ನೌಕರಿಯಲ್ಲಿ ಮೀಸಲಾತಿ ಆಧಾರದ ಮೇಲೆ ಬಡ್ತಿ ನೀಡುವ ರಾಜ್ಯ ಸರ್ಕಾರದ ಕಾಯ್ದೆಯನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿದೆ. 
ಇದರಿಂದ ಜೇಷ್ಠತೆ ಆಧಾರದಲ್ಲಿ ಬಡ್ತಿಯಲ್ಲಿ ಮೀಸಲಾತಿ ಬಯಸಿರುವ ಎಸ್‌ಸಿ ಮತ್ತು ಎಸ್‌ಟಿ ಸಮುದಾಯದ ನೌಕರರಿಗೆ ಸಂತಸ ನೀಡಿದೆ. ಆದರೆ, ಸೇವಾ ಹಿರಿತನದ ಆಧಾರದಲ್ಲಿ ಬಡ್ತಿ ಪಡೆದುಕೊಳ್ಳುವ ಸಾಮಾನ್ಯ ವರ್ಗದ ನೌಕರರಿಗೆ ಹಿನ್ನಡೆಯುಂಟಾಗಲಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. 
ಎಸ್‌ಸಿ ಎಸ್‌ಟಿ ಬಡ್ತಿ ಮೀಸಲಾತಿಗೆ ಅನುಮೋದನೆ ನೀಡಿದ ಸಚಿವ ಸಂಪುಟ ಎಸ್‌ಸಿ, ಎಸ್‌ಟಿ ಬಡ್ತಿ ಮೀಸಲಾಯಿ ಕಾಯ್ದೆಯ ಅನುಷ್ಠಾನಕ್ಕೆ ಫೆಬ್ರವರಿಯಲ್ಲಿ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿತ್ತು. 
ಈ ಕಾಯ್ದೆಗೆ ರಾಷ್ಟ್ರಪತಿಗಳ ಅನುಮೋದನೆ ಕೂಡ ದೊರಕಿತ್ತು. ಆದರೆ, ಇದನ್ನು ಪ್ರಶ್ನಿಸಿ ಬಿ.ಕೆ. ಪವಿತ್ರಾ ಹಾಗೂ ಇತರರು ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಸುಪ್ರೀಂಕೋರ್ಟ್ ತೀರ್ಪಿಗೆ ಅನುಗುಣವಾಗಿ ಕಾಯ್ದೆಯನ್ನು ಜಾರಿ ಮಾಡುವುದಾಗಿ ರಾಜ್ಯ ಸರ್ಕಾರ ತಿಳಿಸಿತ್ತು. 
ಈಗ ಸುಪ್ರೀಂಕೋರ್ಟ್ ರಾಜ್ಯ ಸರ್ಕಾರದ ಕಾಯ್ದೆಯನ್ನು ಎತ್ತಿ ಹಿಡಿದಿದೆ. ರಾಜ್ಯ ಸರ್ಕಾರ ಜಾರಿಗೆ ತಂದಿದ್ದ ಕಾಯ್ದೆಗೆ ಫೆ. 27ರಂದು ಸುಪ್ರೀಂಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com