ಪೊಲೀಸರು ಘಟನಾ ಸ್ಥಳವನ್ನು ಪರಿಶೀಲನೆ ಮಾಡಿದ್ದು, ಭಾಗ್ಯಮ್ಮ ಅವರ ತಲೆಗೆ ಕಬ್ಬಿಣದ ಸಲಾಕೆಯಿಂದ ಬಲವಾಗಿ ಹೊಡೆದಿದ್ದು, ಬಳಿಕ ಹರಿತವಾದ ಚಾಕುವಿನಿಂದ ಇರಿದಿದ್ದಾರೆ. ಪ್ರಸ್ತುತ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ವರದಿ ಬಂದ ಬಳಿಕ ಮುಂದಿನ ಕ್ರಮ ಜರುಗಿಸಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.