ರಾಮನಗರ: ಹಳೆ ವೈಷಮ್ಯ, ರೈತನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಭೀಕರ ಹತ್ಯೆ

ಹಳೆ ದ್ವೇಷದ ಹಿನ್ನೆಲೆಯಲ್ಲಿ ರೈತರೊಬ್ಬರ ಕಣ್ಣಿಗೆ ಖಾರದ ಪುಡಿ ಎರಚಿ ಹಲ್ಲೆ ನಡೆಸಿ ಬಳಿಕ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ರಾಮನಗರದ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 

ರಾಮನಗರ: ಹಳೆ ದ್ವೇಷದ ಹಿನ್ನೆಲೆಯಲ್ಲಿ ರೈತರೊಬ್ಬರ ಕಣ್ಣಿಗೆ ಖಾರದ ಪುಡಿ ಎರಚಿ ಹಲ್ಲೆ ನಡೆಸಿ ಬಳಿಕ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ರಾಮನಗರದ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕೊಲೆಯಾದ ರೈತನನ್ನು ಯರೇಹಳ್ಳಿಯ ಪುಟ್ಟರಾಜು (45) ಎಂದು ಪತ್ತೆ ಮಾಡಲಾಗಿದೆ. ಮಧ್ಯರಾತ್ರಿ ಬೈಕ್‌ನಲ್ಲಿ ಮನಗೆ ತೆರಳುತ್ತಿದ್ದ ಪುಟ್ಟರಾಜು ಅವರನ್ನು ದುಷ್ಕರ್ಮಿಗಳು ಅಡ್ಡಗಟ್ಟಿ  ಏಕಾಏಕಿ ಕಣ್ಣಿಗೆ ಖಾರದ ಪುಡಿ ಎರಚಿ ಹಲ್ಲೆ ನಡೆಸಿದ್ದಾರೆ. ಹಲ್ಲೆಯಿಂದ ಕೆಳಗೆ ಬಿದ್ದಿದ್ದ ಪುಟ್ಟರಾಜು ಅವರ ತಲೆಯ ಮೇಲೆ  ದುಷ್ಕರ್ಮಿಗಳು ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾರೆ.

ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ ಎಂದು ರಾಮನಗರ ಗ್ರಾಮಾಂತರ ಪೊಲೀಸರು ತಿಳಿಸಿದ್ದಾರೆ.ಸುದ್ದಿ ತಿಳಿದ ತಕ್ಷಣ ರಾಮನಗರ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮಹಜರು ನಡೆಸಿದರು.ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ದುಷ್ಕರ್ಮಿಗಳ ಪತ್ತೆಗಾಗಿ ಕಾರ್ಯಾಚರಣೆ ಆರಂಭಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com