ಮಂಡ್ಯದಲ್ಲಿ ಭೀಕರ ಅಪಘಾತ: ಲಾರಿಗೆ ಕಾರು ಡಿಕ್ಕಿ, ಕೇರಳದ ನಾಲ್ವರು ದುರ್ಮರಣ

ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕೇರಳ ಮೂಲದ 4 ಮಂದಿ ದುರ್ಮರಣ ಹೊಂದಿರುವ ದಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 
ಮಂಡ್ಯ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕೇರಳ ಮೂಲದ 4 ಮಂದಿ ದುರ್ಮರಣ ಹೊಂದಿರುವ ದಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.
ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ದಾರುಣ ಸಾವನ್ನಪ್ಪಿದ್ದಾರೆ.
ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದಾಗ ಮದ್ದೂರಿನಲ್ಲಿ ಕಾರು ಲಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಜಯದೀಪ್(29), ಜಿನ್ನಿ(27) ಜ್ಞಾನತೀರ್ಥ(29) ಕಿರಣ್(30) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com