ಮಂಗಳೂರು: ಹಾಸನ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಮತ್ತು ಬೆಂಗಳೂರು ಗ್ರಾಮೀಣ ಜಿಲ್ಲೆಗಳಿಗೆ ನೀರಿನ ಸೌಕರ್ಯ ಕಲ್ಪಿಸುವ ಮಹತ್ವದ ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆ ರಾಷ್ಟ್ರೀಯ ಹಸಿರು ನ್ಯಾಯಪೀಠ ಷರತ್ತುಬದ್ದ ಅನುಮೋದನೆ ನೀಡಿದೆ. ಅಲ್ಲದೆ ಪರಿಸರವಾದಿಗಳು ಯೋಜನೆ ವಿರುದ್ಧ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ.