ದಕ್ಷಿಣ ಕನ್ನಡ ಕುಡಿಯುವ ನೀರಿನ ಸಮಸ್ಯೆ: ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಚರ್ಚೆ

ದಕ್ಷಿಣ ಕನ್ನಡ ಜಿಲ್ಲೆಯ ಅದರಲ್ಲೂ ವಿಶೇಷವಾಗಿ ಧರ್ಮಸ್ಥಳ ಹಾಗೂ ಮಂಗಳೂರು ನಗರದ ಕುಡಿಯುವ ನೀರಿನ ಸಮಸ್ಯೆ ಪರಿಹರಿಸುವ ಕುರಿತು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಇಂದು ಮಹತ್ವದ ಸಭೆ ನಡೆಸಿದರು.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಅದರಲ್ಲೂ ವಿಶೇಷವಾಗಿ ಧರ್ಮಸ್ಥಳ ಹಾಗೂ ಮಂಗಳೂರು ನಗರದ ಕುಡಿಯುವ ನೀರಿನ ಸಮಸ್ಯೆ ಪರಿಹರಿಸುವ ಕುರಿತು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಇಂದು ಮಹತ್ವದ ಸಭೆ ನಡೆಸಿದರು.
ಧರ್ಮಸ್ಥಳದಲ್ಲಿ ಈ ಬಾರಿ ನೇತ್ರಾವತಿ ನೀರು ಬತ್ತಿರುವುದರಿಂದ ಉಂಟಾಗಿರುವ ಸಮಸ್ಯೆ ಕುರಿತು ಮುಖ್ಯಮಂತ್ರಿಗಳ ಸೂಚನೆಯಂತೆ ಭೇಟಿ ನೀಡಿದ್ದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆರ್. ಸೆಲ್ವಮಣಿ ಸಮಸ್ಯೆ ಕುರಿತು ಮಾಹಿತಿ ನೀಡಿದರು.
ಅಲ್ಲದೆ ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರು ಧರ್ಮಸ್ಥಳ ಭಾಗದಲ್ಲಿ ಎರಡು ಕಿಂಡಿ ಅಣಿಕಟ್ಟೆ ನಿರ್ಮಿಸಲು ಸರ್ಕಾರಕ್ಕೆ ಮನವಿ ಮಾಡಿರುವ ಹಿನ್ನೆಲೆಯಲ್ಲಿ ಏಳು ಕೋಟಿ ರೂ. ವೆಚ್ಚದಲ್ಲಿ ನೆರಿಯ ಹೊಳೆಗೆ ಹಾಗೂ ನೇತ್ರಾವತಿ ನದಿಗೆ ಕಿಂಡಿ ಅಣೆಕಟ್ಟು ನಿರ್ಮಿಸಲು ಸರ್ಕಾರಕ್ಕೆ ಸಣ್ಣ ನೀರಾವರಿ ಇಲಾಖೆ ಪ್ರಸ್ತಾವನೆ ಸಲ್ಲಿಸಿದೆ ಎಂದು ತಿಳಿಸಿದರು.
ಈ ಪ್ರಸ್ತಾವನೆಯನ್ನು ಅನುಮೋದಿಸಿ, ಕೂಡಲೇ ಕಿಂಡಿ ಅಣೆಕಟ್ಟು ನಿರ್ಮಿಸಲು ಕ್ರಮ ವಹಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.
ಉಳ್ಳಾಲ ಭಾಗದಲ್ಲಿ ಕಡಲ್ಕೊರೆತದಿಂದ ಬಾಧಿತರಾಗುವ 150 ಮನೆಗಳನ್ನು ಗುರುತಿಸಲಾಗಿದ್ದು, ಇವರಿಗೆ ಕೊಡಗು ಮಾದರಿಯಲ್ಲಿ ಪುನರ್ವಸತಿ ಕಲ್ಪಿಸಲು ಮುಖ್ಯಮಂತ್ರಿಗಳು ಸೂಚಿಸಿದರು.
ಉಳ್ಳಾಲದಲ್ಲಿ ಪ್ರತಿವರ್ಷ ಕಡಲ್ಕೊರೆತ ತಡೆಯಲು ಸಮುದ್ರ ತೀರದಲ್ಲಿ ಕಲ್ಲು ಹಾಕಲು ಕೋಟ್ಯಂತರ ರೂಪಾಯಿ ವ್ಯಯಿಸಲಾಗುತ್ತಿದ್ದು, ಕಲ್ಲುಗಳು ಸಮುದ್ರದ ಅಲೆಯಲ್ಲಿ ಕೊಚ್ಚಿ ಹೋಗುತ್ತವೆ. ಇದಕ್ಕೆ ಶಾಶ್ವತ ಪರಿಹಾರ ಒದಗಿಸುವ ಅಗತ್ಯವಿದೆ ಎಂದು ಸಚಿವ ಯು.ಟಿ. ಖಾದರ್ ಅವರು ಮುಖ್ಯಮಂತ್ರಿಗಳ ಗಮನ ಸೆಳೆದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com