ದಾವಣಗೆರೆ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳು, ಕನ್ನಡ ಅಧ್ಯಾಪಕನಿಗೆ ಅಟ್ಟಾಡಿಸಿ ಹೊಡೆದ ವಿದ್ಯಾರ್ಥಿಗಳು!

ಗುರು ಸ್ಥಾನಕ್ಕೆ ಕಳಂಕವಾಗಿ ವಿದ್ಯಾರ್ಥಿನಿಯರ ಜೊತೆ ಅಸಭ್ಯವಾಗಿ ವರ್ತಿಸಿದ್ದಕ್ಕೆ ಕನ್ನಡದ ಅಧ್ಯಾಪಕನಿಗೆ ವಿದ್ಯಾರ್ಥಿಗಳು ಸೇರಿ ಕಾಲೇಜಿನಲ್ಲೇ ಅಟ್ಟಾಡಿಸಿ ಸಖತ್ ಗೂಸ ಕೊಟ್ಟಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 
ದಾವಣಗೆರೆ: ಗುರು ಸ್ಥಾನಕ್ಕೆ ಕಳಂಕವಾಗಿ ವಿದ್ಯಾರ್ಥಿನಿಯರ ಜೊತೆ ಅಸಭ್ಯವಾಗಿ ವರ್ತಿಸಿದ್ದಕ್ಕೆ ಕನ್ನಡದ ಅಧ್ಯಾಪಕನಿಗೆ ವಿದ್ಯಾರ್ಥಿಗಳು ಸೇರಿ ಕಾಲೇಜಿನಲ್ಲೇ ಅಟ್ಟಾಡಿಸಿ ಸಖತ್ ಗೂಸ ಕೊಟ್ಟಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.
ದಾವಣಗೆರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಅಧ್ಯಾಪಕ ಬಸವರಾಜ್ ಎಂಬುವರು ವಿದ್ಯಾರ್ಥಿನಿಯರ ಫೋನ್ ನಂಬರ್ ತೆಗೆದುಕೊಂಡು ಅಸಭ್ಯವಾಗಿ ವರ್ತಿಸುತ್ತಿದ್ದನು. ಇದರಿಂದ ಬೇಸರಗೊಂಡ ವಿದ್ಯಾರ್ಥಿನಿಯರು ತಮ್ಮ ಸಹ ವಿದ್ಯಾರ್ಥಿಗಳಿಗೆ ತಿಳಿಸಿದ್ದಾರೆ. 
ವಿದ್ಯಾರ್ಥಿನಿಯರ ನೋವನ್ನು ಕೇಳಿದ ವಿದ್ಯಾರ್ಥಿಗಳು ಅಧ್ಯಾಪಕ ಹಿಡಿದು ಕಾಲೇಜು ಮುಂಭಾಗದಲ್ಲಿಯೇ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಸದ್ಯ ಅಧ್ಯಾಪಕನನ್ನು ಕಾಲೇಜು ಮಂಡಳಿ ಅಮಾನತು ಮಾಡಿದೆ. 
ಆದರೆ ಅಧಿಕೃತವಾಗಿ ಯಾವುದೇ ವಿದ್ಯಾರ್ಥಿನಿಯರು ನಮಗೆ ದೂರು ನೀಡಲಿಲ್ಲ. ಹೀಗಾಗಿ ನಾವು ಯಾವುದೇ ಕಾನೂನು ಕ್ರಮ ಕೈಗೊಂಡಿಲ್ಲ ಎಂದು ಕಾಲೇಜು ಆಡಳಿತ ಮಂಡಳಿ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com