ಗೌರಿ ಲಂಕೇಶ್ ಹತ್ಯೆ ಪ್ರಕರಣ ಬೇಧಿಸಿದ ವಿಶೇಷ ತನಿಖಾ ತಂಡಕ್ಕೆ 25 ಲಕ್ಷ ರು. ಬಹುಮಾನ!

ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಪ್ರಕರಣ ಭೇದಿಸಿ ರಾಷ್ಟ್ರಮಟ್ಟದಲ್ಲಿ ಮೆಚ್ಚುಗೆ ಪಡೆದ ಹೆಚ್ಚುವರಿ ಪೊಲೀಸ್‌ ಆಯುಕ್ತ ಬಿ.ಕೆ.ಸಿಂಗ್‌ ನೇತೃತ್ವದ ತನಿಖಾ ತಂಡಕ್ಕೆ ರಾಜ್ಯ ...
ಗೌರಿ ಲಂಕೇಶ್
ಗೌರಿ ಲಂಕೇಶ್
ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಪ್ರಕರಣ ಭೇದಿಸಿ ರಾಷ್ಟ್ರಮಟ್ಟದಲ್ಲಿ ಮೆಚ್ಚುಗೆ ಪಡೆದ ಹೆಚ್ಚುವರಿ ಪೊಲೀಸ್‌ ಆಯುಕ್ತ ಬಿ.ಕೆ.ಸಿಂಗ್‌ ನೇತೃತ್ವದ ತನಿಖಾ ತಂಡಕ್ಕೆ ರಾಜ್ಯ ಸರ್ಕಾರ 25 ಲಕ್ಷ ರು. ಬಹುಮಾನ ಘೋಷಿಸಿದೆ. 
ಕೊಲೆ ಪ್ರಕರಣ ಭೇದಿಸಿದ ತನಿಖಾ ತಂಡಕ್ಕೆ 25 ಲಕ್ಷ ರು. ಬಹುಮಾನ ನೀಡುವಂತೆ ಕೋರಿ ಇತ್ತೀಚೆಗೆ ಬಿ.ಕೆ.ಸಿಂಗ್‌ ಅವರು ಗೃಹ ಇಲಾಖೆಗೆ ಪತ್ರ ಬರೆದಿದ್ದರು.
ಸತತವಾಗಿ ಒಂದು ವರ್ಷ ಪರಿಶ್ರಮಪಟ್ಟವಿಶೇಷ ತನಿಖಾ ತಂಡ ಆರೋಪಿಗಳನ್ನು ಮುಂಬೈ ಸೇರಿದಂತೆ ವಿವಿಧೆಡೆ ಬಂಧಿಸಿತ್ತು. ತಂಡದ ಒಟ್ಟು 91 ಮಂದಿ ಪೊಲೀಸ್ ಸಿಬ್ಬಂದಿ 25 ಲಕ್ಷ ರು ಹಣವನ್ನು ಹಂಚಿಕೊಂಡಿದೆ. 
ಗೌರಿ ಲಂಕೇಶ್‌ ಹತ್ಯೆ ಪ್ರಕರಣದ ತನಿಖೆಯಿಂದಾಗಿ ಮಹಾರಾಷ್ಟ್ರದಲ್ಲಿ ನಡೆದಿದ್ದ ವಿಚಾರವಾದಿಗಳಾದ ನರೇಂದ್ರ ದಾಭೋಲ್ಕರ್‌ ಹಾಗೂ ಗೋವಿಂದ ಪಾನ್ಸರೆ ಅವರ ಹತ್ಯೆ ಪ್ರಕರಣದ ಆರೋಪಿಗಳ ಬಗ್ಗೆಯೂ ಸುಳಿವು ಲಭಿಸಿತ್ತು. ವಿಶೇಷ ತನಿಖಾ ತಂಡ ನೀಡಿದ ಸುಳಿವಿನ ಮೇರೆಗೆ ಸಿಬಿಐನವರು ವಿಚಾರವಾದಿಗಳ ಕೊಲೆ ಹಂತಕರನ್ನು ಬಂಧಿಸಿದ್ದರು.
2017ರ ಸೆಪ್ಟಂಬರ್ 5 ರಂದು ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯಾಗಿತ್ತು. ಈ ಪ್ರಕರಣ ಸಂಬಂಧ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ಈ ಪ್ರಕರಣ ಸಂಬಂಧ ವಿಶೇಷ ತನಿಖಾ ತಂಡ 16 ಜನರನ್ನು ಬಂಧಿಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com