ಚಾಮರಾಜನಗರ: ಹುಲಿ ಉಗುರು, ನರಿ ಹಲ್ಲು ಮಾರಾಟ ಮಾಡುತ್ತಿದ್ದ ಇಬ್ಬರು ಕಳ್ಳ ಬೇಟೆಗಾರರ ಬಂಧನ

ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರ ಅರಣ್ಯ ವ್ಯಾಪ್ತಿಯಲ್ಲಿ ಹುಲಿ ಉಗುರು ಮತ್ತು ನರಿ ಹಲ್ಲುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರನ್ನು ರಾಜ್ಯ ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರ ಅರಣ್ಯ ವ್ಯಾಪ್ತಿಯಲ್ಲಿ ಹುಲಿ ಉಗುರು ಮತ್ತು ನರಿ ಹಲ್ಲುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರನ್ನು ರಾಜ್ಯ ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.

ಬಂಧಿತರನ್ನು ಹಾಸನ ಜಿಲ್ಲೆಯ ಧವನ್(45) ಮತ್ತು ಗೋಕುಲ್ ಎಂದು ಗುರುತಿಸಲಾಗಿದೆ ಎಂದು ಅರಣ್ಯ ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ಬಂಧಿತ ಇಬ್ಬರು ಆರೋಪಿಗಳು ಹಕ್ಕಿಪಿಕ್ಕಿ ಜನಾಂಗದವರಾಗಿದ್ದು, ಅವರಿಂದ 6 ಹುಲಿ ಉಗುರು ಮತ್ತು 5 ನರಿ ಹಲ್ಲುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಆರೋಪಿಗಳನ್ನು ಪ್ರಧಾನ ಸಿವಿಲ್‌ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶರ ಮುಂದೆ ಹಾಜರಿಪಡಿಸಲಾಗಿದ್ದು, ನ್ಯಾಯಾಧೀಶರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com