

ಕಲಬುರಗಿ: ಮಾಜಿ ಸಚಿವ ವೈಜನಾಥ್ ಪಾಟೀಲ್ ಅಂತ್ಯಕ್ರಿಯೆ ಭಾನುವಾರ ಸಂಜೆ ಚಿಂಚೋಲಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದೆ..
ಚಿಂಚೋಳಿಯಲ್ಲಿರುವ ಅವರದೇ ಮಾಲಿಕತ್ವದ ಗಂಗಮ್ಮ ಭೀಮಶೆಟ್ಟಿ ಪಾಟೀಲ ಕಲ್ಯಾಣ ಮಂಟಪದ ಆವರಣದಲ್ಲಿ ಅವರ ಅಂತ್ಯಕ್ರಿಯೆ ನೆರವೇರಿದೆ. ಅಂತ್ಯಕ್ರಿಯೆ ಪ್ರಕ್ರಿಯೆಗಳನ್ನು ಪ್ರಭುಚೆನ್ನಬಸವ ಸ್ವಾಮೀಜಿ ನೆರವೇರಿಸಿದ್ದಾರೆ.
ಮಾಜಿ ಸಚಿವ ವೈಜನಾಥ್ ಪಾಟೀಲ್ ಅವರ ಪಾರ್ಥಿವ ಶರೀರ ಹೊತ್ತ ವಿಮಾನವು ಶನಿವಾರ ತಡರಾತ್ರಿ ಕಲಬುರಗಿ ನಗರದ ಪೊಲೀಸ್ ಪೆರೇಡ್ ಮೈದಾನಕ್ಕೆ ಬಂದಿದೆ ಎಂದು ಅವರ ಕುಟುಂಬಸ್ಥರು ತಿಳಿಸಿದ್ದಾರೆ.
ಪಾರ್ಥಿವ ಶರೀರವನ್ನು ಹೆಲಿಪ್ಯಾಡ್‌ನಿಂದ ನಗರದ ಶಾಂತಿನಗರದಲ್ಲಿರುವ ಅವರ ನಿವಾಸಕ್ಕೆ ಕೊಂಡೊಯ್ಯಲಾಯಿತು. ಮನೆಯಲ್ಲಿ ಧಾರ್ಮಿಕ ವಿಧಿಗಳನ್ನು ನೆರವೇರಿಸಲಾಯಿತು., ಜನರು ತಮ್ಮ ನಾಯಕನಿಗೆ ಅಂತಿಮ ಗೌರವ ಸಲ್ಲಿಸಲು ಅನುಕೂಲವಾಗುವಂತೆ ಅಚ್ಚುಕಟ್ಟಾದ ವ್ಯವಸ್ಥೆ ಮಾಡಲಾಗಿದೆ.