ಟ್ರಾಫಿಕ್ ಕಿರಿಕಿರಿಗೆ ಬ್ರೇಕ್; ಬೆಂಗಳೂರು ಉಪನಗರ ರೈಲಿಗೆ ಕೇಂದ್ರದ ಹಸಿರು ನಿಶಾನೆ

ಬೆಂಗಳೂರಿನ ಮಹತ್ವಾಕಾಂಕ್ಷೆಯ ಉಪನಗರ ರೈಲು ಯೋಜನೆಗೆ ಕೊನೆಗೂ ಕೇಂದ್ರ ಸರ್ಕಾರದಿಂದ ಹಸಿರು ನಿಶಾನೆ ದೊರೆತಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 

ಬೆಂಗಳೂರು: ಬೆಂಗಳೂರಿನ ಮಹತ್ವಾಕಾಂಕ್ಷೆಯ ಉಪನಗರ ರೈಲು ಯೋಜನೆಗೆ ಕೊನೆಗೂ ಕೇಂದ್ರ ಸರ್ಕಾರದಿಂದ ಹಸಿರು ನಿಶಾನೆ ದೊರೆತಿದೆ.

ನಗರದ ಸಂಚಾರ ದಟ್ಟಣೆ ನಿಯಂತ್ರಣಕ್ಕಾಗಿಯೇ ಅರಂಭಿಸಲಾಗಿರುವ ಈ ರೈಲು ಯೋಜನೆಗೆ ಅನುಮತಿ ನೀಡುವ ಕುರಿತು ಸೋಮವಾರ ನಡೆದ ರೈಲ್ವೆ ಮಂಡಳಿಯ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಇದರಿಂದ ಬೆಂಗಳೂರು ಹಾಗೂ ಸುತ್ತಮುತ್ತ ಇರುವ ತುಮಕೂರು, ಕೋಲಾರ, ರಾಮನಗರ, ಚಿಕ್ಕಬಳ್ಳಾಪುರ ಮತ್ತಿತರ ನಗರಗಳ ಜನತೆಗೆ ಅನುಕೂಲವಾಗಲಿದೆ.ರಾಜ್ಯ ಸರ್ಕಾರದ ಸಹಭಾಗಿತ್ವಕ್ಕೆ ಸಂಬಂಧಿಸಿದ ಅಂತಿಮ ಹಂತದ ಮಾತುಕತೆಗಾಗಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರೊಂದಿಗೆ ಮಂಡಳಿಯ ಅಧ್ಯಕ್ಷ ವಿನೋದ್‌ಕುಮಾರ್‌ ಯಾದವ್‌ ಅವರು ಮಂಗಳವಾರ ಮತ್ತೊಂದು ಸುತ್ತಿನ ಸಭೆ ನಡೆಸಲಿದ್ದಾರೆ.

ಬೆಂಗಳೂರಿನ ಸಂಚಾರ ದಟ್ಟಣೆ ತಗ್ಗಿಸಲೆಂದೇ ರೂಪಿಸಿರುವ ಉಪನಗರ ರೈಲು ಯೋಜನೆಗೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಸೋಮವಾರ ಇಲ್ಲಿ ನಡೆದ ರೈಲ್ವೆ ಮಂಡಳಿಯ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಬೆಂಗಳೂರು ಹಾಗೂ ಸುತ್ತಮುತ್ತ ಇರುವ ತುಮಕೂರು, ಕೋಲಾರ, ರಾಮನಗರ, ಚಿಕ್ಕಬಳ್ಳಾಪುರ ಮತ್ತಿತರ ನಗರಗಳ ಜನತೆಗೆ ಈ ಯೋಜನೆಯಿಂದ ಸಾಕಷ್ಟು ಅನುಕೂಲವಾಗಲಿದೆ. ಮೆಟ್ರೋ ಸೌಲಭ್ಯ ಇರುವ ಕಡೆ ಉಪನಗರ ರೈಲು ಯೋಜನೆ ಬೇಡ ಎಂಬ ಷರತ್ತನ್ನು ಸಡಿಲಗೊಳಿಸಬೇಕು ಎಂಬ ರಾಜ್ಯದ ಬೇಡಿಕೆಗೆ ಮಂಡಳಿ ಸಮ್ಮತಿ ಸೂಚಿಸಿದ್ದು, ಯೋಜನೆಯ ಜಾರಿಗಾಗಿ ಸ್ಪೆಷಲ್‌ ಪರ್ಪಸ್‌ ವೆಹಿಕಲ್‌ (ಎಸ್‌ಪಿವಿ) ಸ್ಥಾಪಿಸಲು ಸೂಚನೆ ನೀಡಿದೆ. ಈಗಿರುವ ಕೆಲವು ಹಳೆಯ ರೈಲು ಮಾರ್ಗಗಳನ್ನೇ ಅಭಿವೃದ್ಧಿಪಡಿಸಿ ಈ ಯೋಜನೆಗಾಗಿ ಬಳಸಿಕೊಳ್ಳಲು ಉದ್ದೇಶಿಸಿರುವ ರೈಲ್ವೆ ಇಲಾಖೆ, ಕೆಲವು ಹೊಸ ಮಾರ್ಗಗಳನ್ನೂ ರೂಪಿಸಲು ನಿರ್ಧರಿಸಿದೆ.

ರಾಜ್ಯ ಸರ್ಕಾರದ ಸಹಭಾಗಿತ್ವಕ್ಕೆ ಸಂಬಂಧಿಸಿದ ಅಂತಿಮ ಹಂತದ ಮಾತುಕತೆಗಾಗಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರೊಂದಿಗೆ ಮಂಡಳಿಯ ಅಧ್ಯಕ್ಷ ವಿನೋದ್‌ಕುಮಾರ್‌ ಯಾದವ್‌ ಅವರು ಮಂಗಳವಾರ ಮತ್ತೊಂದು ಸುತ್ತಿನ ಸಭೆ ನಡೆಸಲಿದ್ದಾರೆ. 30 ಎಲಿವೇಟೆಡ್ ನಿಲ್ದಾಣಗಳು ಹಾಗೂ 51 ನೆಲಮಟ್ಟದ ನಿಲ್ದಾಣಗಳ ನಿರ್ಮಾಣ ಕಾರ್ಯವು ಯೋಜನೆ ಅಡಿ ನಡೆಯಬೇಕಿದೆ. ಕೆಂಗೇರಿ– ವೈಟ್‌ಫೀಲ್ಡ್, ಬೆಂಗಳೂರು ನಗರ ನಿಲ್ದಾಣ– ರಾಜಾನುಕುಂಟೆ, ನೆಲಮಂಗಲ– ಬೈಯಪ್ಪನಹಳ್ಳಿ ಮತ್ತು ಬೊಮ್ಮಸಂದ್ರ– ದೇವನಹಳ್ಳಿಗಳನ್ನು ಸಂಪರ್ಕಿಸುವ ಮಾರ್ಗಗಳಲ್ಲಿ ಒಟ್ಟು 29 ಹೊಸ ನಿಲ್ದಾಣಗಳು ತಲೆ ಎತ್ತಲಿವೆ.

ಈ ಪೈಕಿ ಒಟ್ಟು 17 ನಿಲ್ದಾಣಗಳು ಅಂತರ್‌ ಬದಲಾವಣೆ (ಇಂಟರ್‌ ಚೇಂಜ್‌) ಸೌಲಭ್ಯ ಹೊಂದಿರುತ್ತವೆ. 5 ನಿಲ್ದಾಣಗಳು ರೈಲು ಮತ್ತು ಮೆಟ್ರೋ ರೈಲು ಬದಲಾವಣೆ ನಿಲ್ದಾಣಗಳಾಗಿ ಕಾರ್ಯ ನಿರ್ವಹಿಸಲಿವೆ. 1983ರಲ್ಲೇ ಯೋಜನಾ ವರದಿ ಸಿದ್ಧಪಡಿಸಿ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದ ರಾಜ್ಯ ಸರ್ಕಾರ, ಖಾಸಗಿ ಸಹಭಾಗಿತ್ವದ (ಪಿಪಿಪಿ) ಮಾದರಿಯ ಈ ಯೋಜನೆಗಾಗಿ ಕಡ್ಡಾಯವಾಗಿ ಪರಿಗಣಿಸುವ ಕೆಲವು ಮಾನದಂಡಗಳನ್ನೂ ಕೈಬಿಡುವಂತೆ ಇತ್ತೀಚೆಗೆ ನಡೆದ ಸಭೆಗಳಲ್ಲಿ ಮನವಿ ಮಾಡಿತ್ತು. ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದರಾಗಿದ್ದ ಅನಂತಕುಮಾರ್‌ ಹಾಗೂ ಉತ್ತರ ಕ್ಷೇತ್ರದ ಸಂಸದ ಪಿ.ಸಿ. ಮೋಹನ್‌ ಈ ಯೋಜನೆ ಆರಂಭಿಸುವಂತೆ ಕೇಂದ್ರದ ಮೇಲೆ ಒತ್ತಡ ಹೇರಿದ್ದರಲ್ಲದೆ, ಯೋಜನೆಯಿಂದ ಸಾರ್ವಜನಿಕರಿಗೆ ದೊರೆಯುವ ಅನುಕೂಲಗಳ ಕುರಿತೂ ಗಮನ ಸೆಳೆದಿದ್ದರು. ಈಗಿರುವ ಕೆಲವು ಹಳೆಯ ರೈಲು ಮಾರ್ಗಗಳನ್ನೇ ಅಭಿವೃದ್ಧಿಪಡಿಸಿ ಈ ಯೋಜನೆಗಾಗಿ ಬಳಸಿಕೊಳ್ಳಲು ಉದ್ದೇಶಿಸಿರುವ ರೈಲ್ವೆ ಇಲಾಖೆ, ಕೆಲವು ಹೊಸ ಮಾರ್ಗಗಳನ್ನೂ ರೂಪಿಸಲು ನಿರ್ಧರಿಸಿದೆ.

30 ಎಲಿವೇಟೆಡ್ ನಿಲ್ದಾಣಗಳು ಹಾಗೂ 51 ನೆಲಮಟ್ಟದ ನಿಲ್ದಾಣಗಳ ನಿರ್ಮಾಣ ಕಾರ್ಯವು ಯೋಜನೆ ಅಡಿ ನಡೆಯಬೇಕಿದೆ. ಕೆಂಗೇರಿ– ವೈಟ್‌ಫೀಲ್ಡ್, ಬೆಂಗಳೂರು ನಗರ ನಿಲ್ದಾಣ– ರಾಜಾನುಕುಂಟೆ, ನೆಲಮಂಗಲ– ಬೈಯಪ್ಪನಹಳ್ಳಿ ಮತ್ತು ಬೊಮ್ಮಸಂದ್ರ– ದೇವನಹಳ್ಳಿಗಳನ್ನು ಸಂಪರ್ಕಿಸುವ ಮಾರ್ಗಗಳಲ್ಲಿ ಒಟ್ಟು 29 ಹೊಸ ನಿಲ್ದಾಣಗಳು ತಲೆ ಎತ್ತಲಿವೆ. ಈ ಪೈಕಿ ಒಟ್ಟು 17 ನಿಲ್ದಾಣಗಳು ಅಂತರ್‌ ಬದಲಾವಣೆ (ಇಂಟರ್‌ ಚೇಂಜ್‌) ಸೌಲಭ್ಯ ಹೊಂದಿರುತ್ತವೆ. 5 ನಿಲ್ದಾಣಗಳು ರೈಲು ಮತ್ತು ಮೆಟ್ರೋ ರೈಲು ಬದಲಾವಣೆ ನಿಲ್ದಾಣಗಳಾಗಿ ಕಾರ್ಯ ನಿರ್ವಹಿಸಲಿವೆ.

1983ರಲ್ಲೇ ಯೋಜನಾ ವರದಿ ಸಿದ್ಧಪಡಿಸಿ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದ ರಾಜ್ಯ ಸರ್ಕಾರ, ಖಾಸಗಿ ಸಹಭಾಗಿತ್ವದ (ಪಿಪಿಪಿ) ಮಾದರಿಯ ಈ ಯೋಜನೆಗಾಗಿ ಕಡ್ಡಾಯವಾಗಿ ಪರಿಗಣಿಸುವ ಕೆಲವು ಮಾನದಂಡಗಳನ್ನೂ ಕೈಬಿಡುವಂತೆ ಇತ್ತೀಚೆಗೆ ನಡೆದ ಸಭೆಗಳಲ್ಲಿ ಮನವಿ ಮಾಡಿತ್ತು. ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದರಾಗಿದ್ದ ಅನಂತಕುಮಾರ್‌ ಹಾಗೂ ಉತ್ತರ ಕ್ಷೇತ್ರದ ಸಂಸದ ಪಿ.ಸಿ. ಮೋಹನ್‌ ಈ ಯೋಜನೆ ಆರಂಭಿಸುವಂತೆ ಕೇಂದ್ರದ ಮೇಲೆ ಒತ್ತಡ ಹೇರಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com