ಬಿಎಸ್‌ವೈ ಆಡಿಯೋ ಸಾಕ್ಷ್ಯವಾಗಿ ಪರಿಗಣನೆ: ಸುಪ್ರೀಂಕೋರ್ಟ್
ನವದೆಹಲಿ: ಸೋರಿಕೆಯಾಗಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ಆಡಿಯೋವನ್ನು ಸುಪ್ರೀಂಕೋರ್ಟ್ ಸಾಕ್ಷ್ಯವಾಗಿ ಪರಿಗಣಿಸಿದೆ.
ಸೋಮವಾರ ಸುಪ್ರೀಂಕೋರ್ಟ್ ಕದ ತಟ್ಟಿದ್ದ ಕಾಂಗ್ರೆಸ್, ಸಿಎಂ ಯಡಿಯೂರಪ್ಪರ ಆಡಿಯೋವನ್ನು ಪರಿಗಣಿಗಣಿಸಿ ಮತ್ತೆ ವಿಚಾರಣೆಗೆ ಅವಕಾಶ ನೀಡಬೇಕು ಎಂದು ಮನವಿ ಮಾಡಿತ್ತು.
ನಮ್ಮ ಕಾನೂನಾತ್ಮಕ ಹೋರಾಟಕ್ಕೆ ಜಯ ಸಿಕ್ಕಿದೆ. ಶಾಸಕರು ರಾಜೀನಾಮೆ ನೀಡಲು ಯಾರು ಕಾರಣ ಎಂದು ಸಿಎಂ ಬಿಎಸ್ ಯಡಿಯೂರಪ್ಪ ವಿವರಿಸಿರುವ ಆಡಿಯೊ/ವಿಡಿಯೊವನ್ನು ತೀರ್ಪು ನೀಡುವ ಸಂದರ್ಭ ಸಾಕ್ಷಿಯಾಗಿ ಪರಿಗಣಿಸುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ ಎಂದು ಕಾಂಗ್ರೆಸ್ ನಾಯಕ ಪ್ರಕಾಶ್ ರಾಥೋಡ್ ತಿಳಿಸಿದ್ದಾರೆ.
ನ್ಯಾಯಮೂರ್ತಿ ರಮಣ ನೇತೃತ್ವದ ತ್ರಿಸದಸ್ಯ ಪೀಠವು ಸೋರಿಕೆಯಾಗಿರುವ ಬಿಎಸ್ ಯಡಿಯೂರಪ್ಪ ಅವರ ಆಡಿಯೊ ಇರುವ ಸಿಡಿಯನ್ನು ಸ್ವೀಕರಿಸಿಸಿರುವುದಾಗಿ ಹೇಳಿದ್ದು, ಅನರ್ಹ ಶಾಸಕರ ಭವಿಷ್ಯ ಮತ್ತಷ್ಟು ಬಿಗಡಾಯಿಸಿದೆ. ಕಾಂಗ್ರೆಸ್ ಪರ ಹಿರಿಯ ವಕೀಲ ಕಪಿಲ್ ಸಿಬಲ್ ವಾದಿಸಿದರು. ಸಿಎಂ ಬಿಎಸ್‌ವೈ ಪರ ಸುಂದರಂ ವಾದಿಸಿದರು.
ಜೆಡಿಎಸ್ ಪರ ವಕೀಲ ಧವನ್ ತೀರ್ಪಿನ ಸಂದರ್ಭ ಆಡಿಯೊ ಪರಿಶೀಲಿಸಬೇಕು ಎಂದು ಮನವಿ ಮಾಡಿದರು. ಅನರ್ಹ ಶಾಸಕರ ಪ್ರಕರಣಕ್ಕೂ ಬಿಎಸ್‌ವೈ ಆಡಿಯೊ ವಿಚಾರಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಅನರ್ಹ ಶಾಸಕರ ಪರ ವಕೀಲರು ವಾದಿಸಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ