ಸಂಗ್ರಹ ಚಿತ್ರ
ರಾಜ್ಯ
ಬೆಂಗಳೂರಿನ ಐಐಎಸ್ ಸಿಯ ಪ್ರೊ. ಜಿ.ಮುಗೇಶ್ ಸೇರಿ 6 ಜನರಿಗೆ 2019 ರ ಇನ್ಫೋಸಿಸ್ ಪ್ರಶಸ್ತಿ
ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯ (ಐಐಎಸ್ ಸಿ) ಅಜೈವಿಕ ಮತ್ತು ಭೌತಿಕ ರಸಾಯನಶಾಸ್ತ್ರ ವಿಭಾಗದ ಪ್ರೊಫೆಸರ್ ಜಿ.ಮುಗೇಶ್ ಸೇರಿದಂತೆ ಆರು ಜನರಿಗೆ ಗುರುವಾರ ಇನ್ಫೋಸಿಸ್ ವಿಜ್ಞಾನ ಫೌಂಡೇಷನ್ 2019ನೇ ಸಾಲಿನ ಇನ್ಫೋಸಿಸ್ ಪ್ರಶಸ್ತಿ ಪ್ರಕಟಿಸಿದೆ.
ಬೆಂಗಳೂರು: ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯ (ಐಐಎಸ್ ಸಿ) ಅಜೈವಿಕ ಮತ್ತು ಭೌತಿಕ ರಸಾಯನಶಾಸ್ತ್ರ ವಿಭಾಗದ ಪ್ರೊಫೆಸರ್ ಜಿ.ಮುಗೇಶ್ ಸೇರಿದಂತೆ ಆರು ಜನರಿಗೆ ಗುರುವಾರ ಇನ್ಫೋಸಿಸ್ ವಿಜ್ಞಾನ ಫೌಂಡೇಷನ್ 2019ನೇ ಸಾಲಿನ ಇನ್ಫೋಸಿಸ್ ಪ್ರಶಸ್ತಿ ಪ್ರಕಟಿಸಿದೆ.
ಸುದ್ದಿಗೋಷ್ಠಿಯಲ್ಲಿ ಈ ವಿವರ ನೀಡಿದ ಇನ್ಫೋಸಿಸ್ ಸೈನ್ಸ್ ಫೌಂಡೇಷನ್ ನ ಅಧ್ಯಕ್ಷ ಮತ್ತು ಇನ್ಫೋಸಿಸ್ ಲಿಮಿಟೆಡ್ ನ ಸಹ ಸಂಸ್ಥಾಪಕ ಎಸ್. ಡಿ.ಶಿಬುಲಾಲ್, ಇನ್ಫೋಸಿಸ್ ಫೌಂಡೇಷನ್ ಪ್ರತಿ ವರ್ಷ ವಿಜ್ಞಾನ, ಸಂಶೋಧನೆ ಮತ್ತು ಆವಿಷ್ಕಾರದಲ್ಲಿ ಅಪರೂಪದ ಸಾಧನೆ ಮಾಡಿದವರನ್ನು ಗುರುತಿಸಿ ಗೌರವಿಸುತ್ತಿದೆ.
ಈ ವರ್ಷ ಕೂಡ 194 ಅರ್ಜಿಗಳ ಪೈಕಿ ಮನುಕುಲಕ್ಕೆ ಮತ್ತು ಸಮಾಜಕ್ಕೆ ತಮ್ಮ ಸಂಶೋಧನೆಗಳ ಮೂಲಕ ಅತ್ಯುತ್ತಮ ಸಾಧನೆ ನೀಡಿದವರನ್ನು ಗುರುತಿಸಿ ಗೌರವಿಸಲಾಗುತ್ತಿದೆ ಎಂದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ