ನ,26 ಸಂವಿಧಾನ ದಿನ ಆಚರಣೆ: ಸಿಎಂಗೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಸಲಹೆ

ನವೆಂಬರ್ 26 ರಂದು ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳು, ವಿಶ್ವವಿದ್ಯಾಲಯಗಳು ಹಾಗೂ ಶಿಕ್ಷಣ ಸಂಸ್ಥೆಗಳಲ್ಲಿ ಸಂವಿಧಾನದ ದಿನವೆಂದು ಆಚರಿಸಲು ಸೂಕ್ತ ನಿರ್ದೇಶನ ನೀಡುವಂತೆ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸಲಹೆ ನೀಡಿದ್ದಾರೆ. 
ಸ್ಪೀಕರ್ ವಿಶ್ವೇಶ್ವರ ಹೆಗಡೆ
ಸ್ಪೀಕರ್ ವಿಶ್ವೇಶ್ವರ ಹೆಗಡೆ

ಬೆಂಗಳೂರು: ನವೆಂಬರ್ 26 ರಂದು ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳು, ವಿಶ್ವವಿದ್ಯಾಲಯಗಳು ಹಾಗೂ ಶಿಕ್ಷಣ ಸಂಸ್ಥೆಗಳಲ್ಲಿ ಸಂವಿಧಾನದ ದಿನವೆಂದು ಆಚರಿಸಲು ಸೂಕ್ತ ನಿರ್ದೇಶನ ನೀಡುವಂತೆ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸಲಹೆ ನೀಡಿದ್ದಾರೆ. 

ಈ ಕುರಿತು ಸಿಎಂಗೆ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಪತ್ರವೊಂದನ್ನು ಬರೆದಿದ್ದಾರೆ. ಶಾಲೆಗಳು, ವಿಶ್ವವಿದ್ಯಾಲಯಗಳು, ಶಿಕ್ಷಣ ಸಂಸ್ಥೆಗಳು, ಖಾಸಗಿ ಮತ್ತು ಸರ್ಕಾರ ಕಚೇರಿ, ಇತರೆ ಸ್ಥಳಗಳಲ್ಲಿ ನ.26 ರಂದು ಸಂವಿಧಾನ ದಿನವೆಂದು ಆಚರಿಸಲು ಸೂಕ್ತ ನಿರ್ದೇಶನ ನೀಡುವಂತೆ ತಿಳಿಸಿದ್ದಾರೆಂದು ತಿಳಿದುಬಂದಿದೆ. 

ಯುವ  ಜನತೆಗೆ ಸಂವಿಧಾನದ ಪ್ರಾಮುಖ್ಯತೆಯ ಬಗ್ಗೆ ಅರಿವು ಮೂಡಿಸುವ ಅಗತ್ಯವಿದೆ. ಈ ಬಗ್ಗೆ ಪ್ರಚಾರದ ಅಗತ್ಯವಿದೆ. ಸಂವಿಧಾನದ ದಿನದ ಕುರಿತು ಕಾರ್ಯಕ್ರಮಗಳನ್ನು ಆಯೋಜಿಸಬೇಕೆಂದು ಕಾಗೇರಿಯವರು ಪತ್ರದಲ್ಲಿ ತಿಳಿಸಿದ್ದಾರೆ. 

2015ರಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನ.26ರಂದು ಸಂವಿಧಾನ ದಿನವೆಂದು ಆಚರಿಸುವಂತೆ ಘೋಷಣೆ ಮಾಡಿದ್ದರು. ಅಂದಿನಿಂದ ಇಂದಿನ ವರೆಗೂ ದೇಶದಲ್ಲಿ ನ.26 ರಂದು ಸಂವಿಧಾನ ದಿನವೆಂದು ಆಚರಿಸಲಾಗುತ್ತಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com