ಬೆಂಗಳೂರು: ಕೋಟಕ್ ಮಹೀಂದ್ರ ಬ್ಯಾಂಕ್‌ ಡೆಪ್ಯುಟಿ ಮ್ಯಾನೇಜರ್ ಆತ್ಮಹತ್ಯೆ

ಜಾರ್ಖಂಡ್ ಮುಖ್ಯಮಂತ್ರಿ ರಘುಬರ್​ ದಾಸ್​ ಅವರ ಮಾಜಿ ಸಲಹೆಗಾರನ ಪುತ್ರ ಕೋಟಕ್ ಮಹೀಂದ್ರ ಬ್ಯಾಂಕ್‌ನ ಉಪ ಪ್ರಬಂಧಕ ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಜಾರ್ಖಂಡ್ ಮುಖ್ಯಮಂತ್ರಿ ರಘುಬರ್​ ದಾಸ್​ ಅವರ ಮಾಜಿ ಸಲಹೆಗಾರನ ಪುತ್ರ ಕೋಟಕ್ ಮಹೀಂದ್ರ ಬ್ಯಾಂಕ್‌ನ ಉಪ ಪ್ರಬಂಧಕ ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಕೋಟಕ್ ಮಹೀಂದ್ರ ಬ್ಯಾಂಕ್​​ನ ಡೆಪ್ಯುಟಿ ಮ್ಯಾನೇಜರ್ ಆಗಿದ್ದ 27 ವರ್ಷದ ರೋಹಿತ್, ನಗರದ ದೊಮ್ಮಲೂರು ಬಳಿಯ ಸಾಯಿಕೃಷ್ಣ ಅಪಾರ್ಟ್​​​ಮೆಂಟ್​​ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶನಿವಾರ ಬೆಳಗ್ಗೆ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಅಪಾರ್ಟ್​​ಮೆಂಟ್​ನ ಫ್ಯ್ಲಾಟ್‌ನಿಂದ ಕೆಟ್ಟ ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ಅಪಾರ್ಟ್​​ಮೆಂಟ್​ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ರವಾನಿಸಿದರು.ಮೃತನ ಸಾವಿಗೆ ಕಾರಣವಿನ್ನೂ ತಿಳಿದುಬಂದಿಲ್ಲ.

ಮೃತಪಟ್ಟ ಎರಡು ದಿನಗಳ ನಂತರ ಶವ ಪತ್ತೆಯಾಗಿದೆ ಎಂದು ಇಂದಿರಾನಗರ ಪೊಲೀಸರು ತಿಳಿಸಿದ್ದಾರೆ. ರೋಹಿತ್ ಸ್ನಾತಕೋತ್ತರ ಪದವಿಧರರಾಗಿದ್ದು ಕಳೆದ ಒಂದೆರಡು ವರ್ಷಗಳಿಂದ  ದೊಮ್ಮಲೂರಿನ  ಅಪಾರ್ಟ್‌ಮೆಂಟ್‌ನಲ್ಲಿ ತಂಗಿದ್ದರು ಎಂದು ಇಂದಿರಾನಗರ ಪೊಲೀಸರು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com