ಅಯೋಧ್ಯೆ ತೀರ್ಪು: ದೆಹಲಿ ಶಾಂತಿ ಸಭೆಯಲ್ಲಿ ಭಾಗಿಯಾದ ಪೇಜಾವರ ಶ್ರೀ

ಸುಪ್ರೀಂಕೋರ್ಟ್ ನೀಡಿದ ಅಯೋಧ್ಯೆ ತೀರ್ಪಿಗೆ ಸಂಬಂಧಿಸಿದಂತೆ ಭಾನುವಾರ ರಾಜಧಾನಿ ದೆಹಲಿಯಲ್ಲಿ ನಡೆದ ಹಿಂದೂ ಸಂತರು, ಮುಸ್ಲಿಂ ಧಾರ್ಮಿಕ ಮುಖಂಡರ ಶಾಂತಿ ಸಭೆಯಲ್ಲಿ ಪೇಜಾವರ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಗಳು ಪಾಲ್ಗೊಂಡರು. 
ಪೇಜಾವರ ಶ್ರೀ
ಪೇಜಾವರ ಶ್ರೀ

ಉಡುಪಿ: ಸುಪ್ರೀಂಕೋರ್ಟ್ ನೀಡಿದ ಅಯೋಧ್ಯೆ ತೀರ್ಪಿಗೆ ಸಂಬಂಧಿಸಿದಂತೆ ಭಾನುವಾರ ರಾಜಧಾನಿ ದೆಹಲಿಯಲ್ಲಿ ನಡೆದ ಹಿಂದೂ ಸಂತರು, ಮುಸ್ಲಿಂ ಧಾರ್ಮಿಕ ಮುಖಂಡರ ಶಾಂತಿ ಸಭೆಯಲ್ಲಿ ಪೇಜಾವರ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಗಳು ಪಾಲ್ಗೊಂಡರು. 

ಅಯೋಧ್ಯೆ ಕುರಿತು ತೀರ್ಪು ಬರುವುದಕ್ಕೂ ಮುನ್ನ ಹಾಗೂ ತೀರ್ಪು ಬಂದ ಬಳಿಯ ಯಾವ ರೀತಿಯ ಕ್ರಮ ಕೈಗೊಳ್ಳಬೇಕೆಂಬ ಉದ್ದೇಶದಿಂದ ಪ್ರಮುಖ ಸಂತರು, ವಿಶ್ವ ಹಿಂದೂ ಪರಿಷತ್ ಮುಖಂಡರ ಸಭೆಯನ್ನು ಭಾನುವಾರ ನಿಗದಿಪಡಿಸಲಾಗಿತ್ತು. ತೀರ್ಪು ಪ್ರಕಟಗೊಂಡ ಹಿನ್ನಲೆಯಲ್ಲಿ ಸಭೆಯಚನ್ನು ಎರಡು ಧರ್ಮಗಳ ಮುಖಂಡರ ಶಾಂತಿ ಸಭೆಯಾಗಿ ನಡೆಸಲಾಯಿತು. 
   
ಉಡುಪಿಯಲ್ಲಿದ್ದ ಸ್ವಾಮೀಜಿಗಳು ಸಭೆ ಹಿನ್ನಲೆಯಲ್ಲಿ ಭಾನುವಾರ ಮಂಗಳೂರಿನ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದಲ್ಲಿ ದೆಹಲಿಗೆ ಪ್ರಯಾಣ ಬೆಳೆಸಿ ಸಭೆಯಲ್ಲಿ ಭಾಗವಹಿಸಿದರು. ಪ್ರಧಾನಮಂತ್ರಿಗಳ ಭದ್ರತಾ ಸಲಹೆಗಾರ ಅಜಿತ್ ದೋವಲ್ ನೇತೃತ್ವದಲ್ಲಿ ಈ ಸಭೆಯನ್ನು ಕರೆಯಲಾಗಿತ್ತು. ಸಭೆಯಲ್ಲಿ ಮಂದಿರ ನಿರ್ಮಾಣ ಕುರಿತು ಸಮಗ್ರ ಸಮಿತಿಯನ್ನು ರಚಿಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ವರದಿಗಳು ತಿಳಿಸಿವೆ.   

ಸಭೆಯಲ್ಲಿ ವಿಶ್ವ ಹಿಂದೂ ಪರಿಷತ್ ನಾಯಕ ಚಂಪತ್ ರಾಯ್, ಸುರೇಂದ್ರ ಜೈನ್, ರಾಮ ಜನ್ಮಭೂಮಿ ಟ್ರಸ್ಟ್ ಅಧ್ಯಕ್ಷ ನೃತ್ಯ ಗೋಪಾಲ್ ದಾಸ್ ಸೇರಿದಂತೆ ಇನ್ನಿತರೆ ಪ್ರಮುಖರು ಹಾಜರಿದ್ದರು. 

ಸಭೆಯಲ್ಲಿ ಭಾಗಿಯಾಗಿದ್ದ ಪೇಜಾವರ ಶ್ರೀಗಳು ಸಭೆ ಬಳಿಕ ಬ್ರಹ್ಮಪುತ್ರ ನದಿ ಬಳಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಲು ನಿರ್ಧರಿಸಿದ್ದರು. ಆದರೆ, ಸಭೆ ಮಧ್ಯಾಹ್ನದವರೆಗೂ ನಡೆದ ಹಿನ್ನಲೆಯಲ್ಲಿ ಭೇಟಿ ರದ್ದುಗೊಳಿಸಿ, ಮೈಸೂರಿಗೆ ತೆರಳಿದರು. 

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com