ಇನ್ನು 2 ದಿನಗಳಲ್ಲಿ ಬೆಂಗಳೂರು ಗುಂಡಿ ಮುಕ್ತ ನಗರ: ಬಿಬಿಎಂಪಿ ಆಯುಕ್ತ

ರಸ್ತೆ ಗುಂಡಿ ಮುಚ್ಚುವಲ್ಲಿ ನಿರ್ಲಕ್ಷ್ಯ ತೋರಿಸುವ ಗುತ್ತಿಗೆದಾರರಿಗೆ ನೋಟಿಸ್ ನೀಡಲು ಸೂಚನೆ ನೀಡಲಾಗಿದ್ದು, ನಗರದಲ್ಲಿ ಬಹುತೇಕ ರಸ್ತೆಗಳನ್ನು ಗುಂಡಿ ಮುಕ್ತಗೊಳಿಸಲಾಗಿದೆ. ಕೇವಲ 742 ರಸ್ತೆ ಗುಂಡಿಗಳನ್ನು ಮುಚ್ಚುವುದು ಬಾಕಿಯಿದೆ ಎಂದು ಬಿಬಿಎಂಪಿ ಆಯುಕ್ತ ಬಿ.ಹೆಚ್.ಅನಿಲ್ ಕುಮಾರ್ ಹೇಳಿದ್ದಾರೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ರಸ್ತೆ ಗುಂಡಿ ಮುಚ್ಚುವಲ್ಲಿ ನಿರ್ಲಕ್ಷ್ಯ ತೋರಿಸುವ ಗುತ್ತಿಗೆದಾರರಿಗೆ ನೋಟಿಸ್ ನೀಡಲು ಸೂಚನೆ ನೀಡಲಾಗಿದ್ದು, ನಗರದಲ್ಲಿ ಬಹುತೇಕ ರಸ್ತೆಗಳನ್ನು ಗುಂಡಿ ಮುಕ್ತಗೊಳಿಸಲಾಗಿದೆ. ಕೇವಲ 742 ರಸ್ತೆ ಗುಂಡಿಗಳನ್ನು ಮುಚ್ಚುವುದು ಬಾಕಿಯಿದೆ ಎಂದು ಬಿಬಿಎಂಪಿ ಆಯುಕ್ತ ಬಿ.ಹೆಚ್.ಅನಿಲ್ ಕುಮಾರ್ ಹೇಳಿದ್ದಾರೆ. 

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅ.1 ರಂದು ಒಟ್ಟು 10,656 ರಸ್ತೆ ಗುಂಡಿಗಳನ್ನು ಗುರ್ತಿಸಲಾಗಿತ್ತು. ಇದತರಲ್ಲಿ 9,914ರಸ್ತೆ ಗುಂಡಿಗಳನ್ನು ಮುಚ್ಚಲಾಗಿದೆ ಎಂದು ತಿಳಿಸಿದರು. 

ರಸ್ತೆ ಗುಂಡಿ ಮುಚ್ಚುವಲ್ಲಿ ನೀತಿ ಸಂಹಿತೆ ಅನ್ವಯಿಸುವುದಿಲ್ಲ .ವೈಟ್ ಟಾಪಿಂಗ್ ಕಾರ್ಯ ಹೀಗೆಯೇ ಮುಂದುವರೆಯಲಿದೆ., ರಸ್ತೆಗಳನ್ನು ಅಗೆದ ಬಿಡಬ್ಲ್ಯೂಎಸ್ಎಸ್"ಬಿಗೆ ರೂ.25 ಸಾವಿರ ದಂಟವನ್ನು ವಿಧಿಸಲಾಗಿದೆ ಎಂದಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com