ವಶ ಪಡಿಸಿಕೊಂಡ ಸೀರೆ
ರಾಜ್ಯ
ಮಹಿಳಾ ಮತದಾರರ ಸೆಳೆಯಲು ಸೀರೆ ಹಂಚಿಕೆ: ಮಂಡ್ಯದಲ್ಲಿ ನೂರಾರು ಸೀರೆ ವಶಕ್ಕೆ
ಮತದಾರರಿಗೆ ಹಂಚಲು ಕಾರಿನಲ್ಲಿ ತೆಗೆದುಕೊಂಡು ಹೋಗುತ್ತಿದ್ದ ಸುಮಾರು 1೦೦೦ ಕ್ಕೂ ಹೆಚ್ಚು ಸೀರೆಗಳನ್ನು ವಶಕ್ಕೆ ಪಡೆಯಲಾಗಿದೆ.
ಮಂಡ್ಯ: ಕೆ.ಆರ್ ಪೇಟೆ ಉಪಚುನಾವಣೆಯಲ್ಲಿ ಮತದಾರರನ್ನು ಸೆಳೆಯಲು ಈಗಿನಿಂದಲೇ ಅಭ್ಯರ್ಥಿಗಳಿಂದ ವಿವಿಧ ರೀತಿಯ ಕಸರತ್ತು ಆರಂಭವಾಗಿದೆ. ಇದರ ಭಾಗವಾಗಿ ಮತದಾರರಿಗೆ ಹಂಚಲು ಕಾರಿನಲ್ಲಿ ತೆಗೆದುಕೊಂಡು ಹೋಗುತ್ತಿದ್ದ ಸುಮಾರು 1೦೦೦ ಕ್ಕೂ ಹೆಚ್ಚು ಸೀರೆಗಳನ್ನು ವಶಕ್ಕೆ ಪಡೆಯಲಾಗಿದೆ.
ಬಿಜೆಪಿ ಅಭ್ಯರ್ಥಿ ನಾರಾಯಣಗೌಡ ಅವರ ಪೋಟೋವನ್ನು ಹೊಂದಿರುವ ಸೀರೆಗಳನ್ನು ಚುನಾವಣಾಧಿಕಾರಿಗಳು. ಕೆ.ಆರ್.ಪೇಟೆ ತಾಲ್ಲೂಕಿನ ಸಾಕ್ಷಿಬೀಡು ಗ್ರಾಮದ ಬಳಿ ವಶಪಡಿಸಿಕೊಂಡಿದ್ದಾರೆ.
(ಕೆ.ಎ.05, ಎಂ.ಇ.0599) ಮಾರುತಿ ಓಮ್ನಿ ಕಾರಿನಲ್ಲಿ ಸಾಗಿಸುತ್ತಿದ್ದ ನಾರಾಯಣಗೌಡ ಅವರ ಪೋಟೋ ದೊಂದಿಗೆ ದೀಪಾವಳಿ ಶುಭಾಶಯ ಕೋರುವ ಸುಮಾರು ಸಾವಿರಾರು ಸೀರೆಯುಳ್ಳ ಬಂಡಲ್ ಗಳನ್ನು ಚುನಾವಣಾ ತಪಾಸಣಾಧಿಕಾರಿ ಅಶೋಕ್ ನೇತೃತ್ವದ ಅಧಿಕಾರಿಗಳು ವಶಪಡಿಕೊಂಡಿದ್ದಾರೆ.
ಘಟನೆ ಕುರಿತು ಗ್ರಾಮಾಂತರ ಪೊಲೀಸ್ ಠಾಣೆಯ ಎಎಸ್.ಐ ಶಿವಕುಮಾರ್ ಯಾದವ್ ಪ್ರಕರಣ ದಾಖಲಿಸಿಕೊಂಡಿದ್ದು ಮುಂದಿನ ತನಿಖೆ ಕೈಗೊಂಡಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ