ಪೊಲೀಸ್​​​​ ಪತ್ನಿಯ ಸರವನ್ನೇ ಕದ್ದು ಪರಾರಿಯಾದ ಸರಗಳ್ಳರು!

ನಿವೃತ್ತ ಪೊಲೀಸ್ ಅಧಿಕಾರಿಯ ಪತ್ನಿ ಧರಿಸಿದ್ದ ಸರವನ್ನು ಸರಗಳ್ಳರು ಕಳವು ಮಾಡಿ ಪರಾರಿಯಾಗಿರುವ ಪ್ರಕರಣ ಮದ್ದೂರು ತಾಲೂಕಿನ ಚಿಕ್ಕೋನಹಳ್ಳಿ ಗ್ರಾಮದ ಹೊರ ವಲಯದಲ್ಲಿ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಮಂಡ್ಯ: ನಿವೃತ್ತ ಪೊಲೀಸ್ ಅಧಿಕಾರಿಯ ಪತ್ನಿ ಧರಿಸಿದ್ದ ಸರವನ್ನು ಸರಗಳ್ಳರು ಕಳವು ಮಾಡಿ ಪರಾರಿಯಾಗಿರುವ ಪ್ರಕರಣ ಮದ್ದೂರು ತಾಲೂಕಿನ ಚಿಕ್ಕೋನಹಳ್ಳಿ ಗ್ರಾಮದ ಹೊರ ವಲಯದಲ್ಲಿ ನಡೆದಿದೆ.

ನಿವೃತ್ತ ಎಎಸ್ಐ ರಾಮಲಿಂಗಯ್ಯ ಎಂಬುವವರ ಪತ್ನಿ ಸುಶೀಲಮ್ಮ ಸರ ಕಳೆದುಕೊಂಡವರು. ಇಂದು ಮಧ್ಯಾಹ್ನ  ಜಮೀನಿನ ಬಳಿ ಕೆಲಸ ಮಾಡುತ್ತಿದ್ದಾಗ ಹಿಂದಿನಿಂದ ಬಂದ ಕಳ್ಳರು  ಸುಶೀಲಮ್ಮಾ ಅವರ ಕುತ್ತಿಗೆಯಿಂದ ಸರ ಕಿತ್ತುಕೊಂಡು ಪರಾರಿಯಾಗಿದ್ದಾರೆ. ಕೂಗಿಕೊಂಡರೂ ಸ್ಥಳದಲ್ಲಿ ಯಾರೂ ಇಲ್ಲದ ಕಾರಣ ಕಳ್ಳರು ಪರಾರಿಯಾಗಿದ್ದಾರೆ .

ಈ ಸಂಬಂಧ ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗಾಗಿ ಕ್ರಮ ಕೈಗೊಳ್ಳಲಾಗಿದೆ

ವರದಿ: ನಾಗಯ್ಯ
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com