ಕೆಎಸ್‌ಆರ್‌ಟಿಸಿ ಬಸ್ ಮಗುಚಿ ಬಿದ್ದು ಓರ್ವ ಪ್ರಯಾಣಿಕ ಸಾವು; 25 ಮಂದಿಗೆ ಗಾಯ

ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್ಸೊಂದು ಮಗುಚಿ ಬಿದ್ದ ಪರಿಣಾಮ ಓರ್ವ ಪ್ರಯಾಣಿಕ ಸಾವನ್ನಪ್ಪಿ, 25ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಚನ್ನರಾಯಪಟ್ಟಣದ ಹಿರಿಸಾವೆ ಬಳಿ ಸೋಮವಾರ ಬೆಳಗ್ಗಿನ ಜಾವ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಹಾಸನ: ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್ಸೊಂದು ಮಗುಚಿ ಬಿದ್ದ ಪರಿಣಾಮ ಓರ್ವ ಪ್ರಯಾಣಿಕ ಸಾವನ್ನಪ್ಪಿ, 25ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಚನ್ನರಾಯಪಟ್ಟಣದ ಹಿರಿಸಾವೆ ಬಳಿ ಸೋಮವಾರ ಬೆಳಗ್ಗಿನ ಜಾವ ನಡೆದಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಭಿಷೇಕ್ (28) ಸಾವನ್ನಪ್ಪಿದವರು ಎಂದು ಗುರುತಿಸಲಾಗಿದೆ.

ಗಾಯಾಳುಗಳನ್ನು ಚನ್ನರಾಯಪಟ್ಟಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳೂರಿನಿಂದ ಬೆಂಗಳೂರಿಗೆ ಬರುತ್ತಿದ್ದಾಗ ಬಸ್ ಅಪಘಾತಕ್ಕೀಡಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಾಳುಗಳನ್ನು ಆದಿ ಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಗಿದೆ, ಹಿರೆಸಾವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com