7ನೇ ತರಗತಿ ಪಬ್ಲಿಕ್ ಪರೀಕ್ಷೆಗೆ ಖಾಸಗಿ ಆಂಗ್ಲ ಮಾಧ್ಯಮ ಶಾಲೆಗಳ ಅಸಮ್ಮತಿ

 7ನೇ ತರಗತಿಗೆ ಪಬ್ಲಿಕ್ ಪರೀಕ್ಷೆ ನಡೆಸಲು ಸಚಿವ ಎಸ್. ಸುರೇಶ್ ಕುಮಾರ್ ಪ್ರಸ್ತಾವನೆ ಮುಂದಿಟ್ಟಿರುವ ಹಿನ್ನೆಲೆಯಲ್ಲಿ ಖಾಸಗಿ ಆಂಗ್ಲ ಮಾಧ್ಯಮ ಶಾಲೆಗಳು ಅಸಮ್ಮತಿ ಸೂಚಿಸಿವೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು:  7ನೇ ತರಗತಿಗೆ ಪಬ್ಲಿಕ್ ಪರೀಕ್ಷೆ ನಡೆಸಲು ಸಚಿವ ಎಸ್. ಸುರೇಶ್ ಕುಮಾರ್ ಪ್ರಸ್ತಾವನೆ ಮುಂದಿಟ್ಟಿರುವ ಹಿನ್ನೆಲೆಯಲ್ಲಿ ಖಾಸಗಿ ಆಂಗ್ಲ ಮಾಧ್ಯಮ ಶಾಲೆಗಳು ಅಸಮ್ಮತಿ ಸೂಚಿಸಿವೆ.

7ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸಲು ಯಾವುದೇ ಕಾರಣಕ್ಕೂ ಒಪ್ಪಿಗೆ ನೀಡುವುದಿಲ್ಲ ಎಂದು ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಪ್ರಧಾನ ಕಾರ್ಯದರ್ಶಿ ಡಿ. ಶಶಿಕುಮಾರ್ ಹೇಳಿದ್ದಾರೆ.

ಪಬ್ಲಿಕ್ ಪರೀಕ್ಷೆ ನಡೆಸಲು ಇನ್ನು 2 ತಿಂಗಳು ಬಾಕಿಯಿದೆ,  ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲು ಸಾಧ್ಯವಿಲ್ಲ ಹಲವು ತೊಂದರೆಗಳಿವೆ ಎಂದು ಹೇಳಿದ್ದಾರೆ.

ಶಿಕ್ಷಣ ಇಲಾಖೆ ಕಳಪೆ ಗುಣಮಟ್ಟದ ಪುಸ್ತಕಗಳನ್ನು ಪೂರೈಸಿರುವುದರಿಂದ ಬಹುತೇಕ ವಿದ್ಯಾರ್ಥಿಗಳು ಪುಸ್ತಕಗಳು ಹಾಳಾಗಿವೆ, ಇದ್ಯಾವುದನ್ನು ಪರಿಗಣಿಸದೇ ಸರ್ಕಾರ ಪಬ್ಲಿಕ್ ಪರೀಕ್ಷೆ ನಡೆಸಲು ಹೊರಟಿರುವುದು ಸರಿಯಲ್ಲ, ಇದಕ್ಕೆ ನಮ್ಮ ಸಮ್ಮತಿಯಲ್ಲ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com