ಜಯಂತಿ ಆಚರಣೆಗಳ ಬಗ್ಗೆ ಸರ್ಕಾರ ನಿರ್ಧಾರ ಕೈಗೊಳ್ಳಲಿದೆ: ಸಿಟಿ ರವಿ

ರಾಜ್ಯದಲ್ಲಿ ಜಯಂತಿ ಆಚರಣೆಯ ಸ್ವರೂಪದಲ್ಲಿ ಬದಲಾವಣೆಗೆ ಸರ್ಕಾರ ಚಿಂತನೆ ನಡೆಸಿದ್ದು, ಇದಕ್ಕಾಗಿ ವಿವಿಧ ಕ್ಷೇತ್ರಗಳಲ್ಲಿನ ತಜ್ಞರ ಅಭಿಮತವನ್ನು ಸಂಗ್ರಹಿಸಿ ಅನಂತರ ಕ್ರಮಕೈಗೊಳ್ಳಲಾಗುವುದು  ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ ರವಿ ಹೇಳಿದ್ದಾರೆ.
ಸಿ.ಟಿ ರವಿ
ಸಿ.ಟಿ ರವಿ

ಮಂಗಳೂರು: ರಾಜ್ಯದಲ್ಲಿ ಜಯಂತಿ ಆಚರಣೆಯ ಸ್ವರೂಪದಲ್ಲಿ ಬದಲಾವಣೆಗೆ ಸರ್ಕಾರ ಚಿಂತನೆ ನಡೆಸಿದ್ದು, ಇದಕ್ಕಾಗಿ ವಿವಿಧ ಕ್ಷೇತ್ರಗಳಲ್ಲಿನ ತಜ್ಞರ ಅಭಿಮತವನ್ನು ಸಂಗ್ರಹಿಸಿ ಅನಂತರ ಕ್ರಮಕೈಗೊಳ್ಳಲಾಗುವುದು  ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ ರವಿ ಹೇಳಿದ್ದಾರೆ.

ಮಂಗಳೂರಿನಲ್ಲಿ ಮಾತನಾಡಿದ ಅವರು ಜಯಂತಿಗಳ ಕುರಿತು ಮಾಹಿತಿ ಸಂಗ್ರಹಣೆ ಮಾಡಲಾಗುತ್ತಿದೆ. ಜಯಂತಿಯ ಸ್ವರೂಪ ಹೇಗೆ ಇರಬೇಕು ಎಂಬುದರ ಕುರಿತು ಸಾರ್ವಜನಿಕರಿಂದ ಅಭಿಪ್ರಾಯ ಸಂಗ್ರಹಿಸಿ, ನಂತರ ಆ ವರದಿಯನ್ನು ಸಂಪುಟದಲ್ಲಿ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

ಎಷ್ಟೋ ಜಯಂತಿಗಳು ಸಂಘಟಕರು ಹಾಗೂ ಜನರು ಇಲ್ಲದೆ ಸೊರಗಿ ಹೋಗಿವೆ. ಕೆಲ ಜಯಂತಿಗಳು ಜಾತಿಗೆ ಸೀಮಿತವಾಗಿವೆ. ಜಾತಿ ಮೀರಿ ಬದುಕುವ ಮಹಾತ್ಮರನ್ನು ಜಾತಿಯ ಫ್ರೇಮ್‍ಗೆ ತಂದು ಕಟ್ಟಿ ಹಾಕುವುದು ಅವರ ತತ್ವಕ್ಕೆ ಮಾಡಿದ ಅಪಮಾನ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಜಯಂತಿ ರದ್ದಾದರೆ ಅದನ್ನು ಎತ್ತಿ ಕಟ್ಟುವ ಕೆಲಸ ಮಾಡುತ್ತಾರೆ. ಇದಕ್ಕೆ ಆಸ್ಪದ ಕೊಡದ ರೀತಿ ಏನು ಮಾಡಬೇಕೋ ಅದನ್ನು ಮಾಡುತ್ತೇವೆ ಎನ್ನುವ ಮೂಲಕ ಜಯಂತಿಗಳನ್ನು ರದ್ದು ಮಾಡುವ ಚಿಂತನೆ ಸರ್ಕಾರದ ಮುಂದಿದೆ ಎನ್ನುವುದನ್ನು ಸೂಚ್ಯವಾಗಿ ತಿಳಿಸಿದ್ದಾರೆ. ಜೊತೆಗೆ ಟಿಪ್ಪು ಜಯಂತಿಯನ್ನು ಈಗಾಗಲೇ ರದ್ದು ಮಾಡಲಾಗಿದೆ. ಅದನ್ನು ಪುನರ್ ವಿಮರ್ಶೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಸಚಿವ ಸಿ.ಟಿ.ರವಿ ಖಡಕ್ಕಾಗಿ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com