ಅ.23 ರಿಂದ ಮೂರು ದಿನ ಕಿತ್ತೂರು ಉತ್ಸವ- ಜಗದೀಶ್ ಶೆಟ್ಟರ್ 

ಪ್ರತಿ ವರ್ಷದಂತೆ ಈ ಬಾರಿಯೂ ಕಿತ್ತೂರು ಉತ್ಸವವನ್ನು ಅಕ್ಟೋಬರ್ 23 ರಿಂದ ಮೂರು ದಿನಗಲ ಕಾಲ ಆಚರಿಸಲು ನಿರ್ಧರಿಸಲಾಗಿದೆ ಎಂದು ಬೃಹತ್ ,ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಜಗದೀಶ್ ಶೆಟ್ಟರ್
ಜಗದೀಶ್ ಶೆಟ್ಟರ್

ಬೆಳಗಾವಿ: ಪ್ರತಿ ವರ್ಷದಂತೆ ಈ ಬಾರಿಯೂ ಕಿತ್ತೂರು ಉತ್ಸವವನ್ನು ಅಕ್ಟೋಬರ್ 23 ರಿಂದ ಮೂರು ದಿನಗಲ ಕಾಲ ಆಚರಿಸಲು ನಿರ್ಧರಿಸಲಾಗಿದೆ ಎಂದು ಬೃಹತ್ ,ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ಕಿತ್ತೂರು ಉತ್ಸವಕ್ಕೆ ಸಂಬಂಧಿಸಿದಂತೆ ಇಂದು ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಿತ್ತೂರು ಇತಿಹಾಸ, ಚೆನ್ನಮ್ಮ ಶೌರ್ಯ - ಸಾಹಸ ಯುವ ಪೀಳಿಗೆಗೆ ಸ್ಪೂರ್ತಿಯಾಗಬೇಕು ಎಂಬ ಉದ್ದೇಶದಿಂದ ಉತ್ಸವ ಆಚರಿಸಲಾಗುತ್ತಿದೆ ಎಂದು ತಿಳಿಸಿದರು.

ಪ್ರವಾಹದಿಂದ ಸಂಕಷ್ಟದಲ್ಲಿರುವ ಜನರಿಗೆ ಸ್ಪಂದಿಸುವ ಜೊತೆಗೆ ಎಲ್ಲರ ಆಶಯದಂತೆ ಕಿತ್ತೂರು ಉತ್ಸವನ್ನು ಅಕ್ಟೋಬರ್ 23, 24 ಹಾಗೂ 25 ರಂದು ಆಚರಿಸಲು ನಿರ್ಧರಿಸಲಾಗಿದೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com