ಪ್ರವಾಹ ಪರಿಹಾರ ಕುರಿತ ರಾಜ್ಯ ಪ್ರಸ್ತಾವನೆಯನ್ನು ಕೇಂದ್ರ ತಿರಸ್ಕರಿಸಿಲ್ಲ: ಸಿಎಂ ಯಡಿಯೂರಪ್ಪ ಸಮರ್ಥನೆ

ಪ್ರವಾಹ ಪರಿಹಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸಲ್ಲಿಸಿದ್ದ ವರದಿಯನ್ನು ಕೇಂದ್ರ ಸರ್ಕಾರ ತಿರಸ್ಕರಿಸಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶುಕ್ರವಾರ ಸಮರ್ಥನೆ ನೀಡಿದ್ದಾರೆ. 
ಸಿಎಂ ಯಡಿಯೂರಪ್ಪ
ಸಿಎಂ ಯಡಿಯೂರಪ್ಪ
Updated on: 

ಬೆಳಗಾವಿ: ಪ್ರವಾಹ ಪರಿಹಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸಲ್ಲಿಸಿದ್ದ ವರದಿಯನ್ನು ಕೇಂದ್ರ ಸರ್ಕಾರ ತಿರಸ್ಕರಿಸಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶುಕ್ರವಾರ ಸಮರ್ಥನೆ ನೀಡಿದ್ದಾರೆ. 

ಈ ಕುರಿತು ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಸ್ಪಷ್ಟನೆ ನೀಡಿರುವ ಯಡಿಯೂರಪ್ಪ ಅವರು, ಪ್ರವಾಹ ಪರಿಹಾರ ಕುರಿತು ರಾಜ್ಯ ಸರ್ಕಾರ ಸಲ್ಲಿಸಿದ್ದ ಪ್ರಸ್ತಾವನೆಗೂ, ಕೇಂದ್ರ ನಡೆಸಿದ್ದ ವರದಿಗೂ ತಾಳೆಯಾಗಿಲ್ಲ. ಹೀಗಾಗಿ ಕೇಂದ್ರ ಸರ್ಕಾರ ಈ ಸಂಬಂಧ ಸ್ಪಷ್ಟನೆ ಕೇಳಿದೆ. ಪ್ರಸ್ತಾವನೆ ತಿರಸ್ಕರಿಸಿದೆ ಎಂದು ಹೇಳಿರುವುದು ಸುಳ್ಳು ಎಂದು ಹೇಳಿದ್ದಾರೆ. 

ಕೇಂದ್ದ ವರದಿಗೂ, ರಾಜ್ಯದ ವರದಿಗೂ ತಾಳೆಯಾಗಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿರುವ ಹಿನ್ನಲೆಯಲ್ಲಿ ಅಧಿಕಾರಿಗಳನ್ನು ರಾಜಧಾನಿ ದೆಹಲಿಗೆ ಕಳುಹಿಸಲಾಗಿದೆ. ಈಗಾಗಲೇ ಎಲ್ಲಾ ಕೇಂದ್ರ ಸಚಿವರ ಜೊತೆಗೂ ಮಾತುಕತೆ ನಡೆಸಿದ್ದೇನೆ. ಇನ್ನು 3-4 ದಿನಗಳಲ್ಲಿ ಪರಿಹಾರ ಬಿಡುಗಡೆಯಾಗಲಿದೆ. ದೇಶದ ನೆರೆ ಪೀಡಿತ ಯಾವುದೇ ರಾಜ್ಯಗಳಿಗೂ ಇನ್ನೂ ಪರಿಹಾರ ಬಿಡುಗಡೆಯಾಗಿಲ್ಲ.

ರಾಜ್ಯದ ಬೊಕ್ಕಸ ಇನ್ನೂ ಖಾಲಿಯಾಗಿಲ್ಲ. ಖಾಲಿಯಾಗಿದಿದ್ದರೆ ಪರಿಹಾರ ನೀಡಲು ಸಾಧ್ಯವಾಗುತ್ತಿರಲಿಲ್ಲ. ರಾಜ್ಯಕ್ಕೆ ಕೇಂದ್ರ ಸರ್ಕಾರ ಪರಿಹಾರ ನೀಡುವ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com