ಎನ್ ಡಿಆರ್ ಎಫ್ ಮಾರ್ಗ ಸೂಚಿ ಪರಿಷ್ಕರಣೆಗಾಗಿ ಪ್ರಧಾನಿ, ಗೃಹ ಸಚಿವರ ಬಳಿಗೆ ನಿಯೋಗ: ಯಡಿಯೂರಪ್ಪ

ಬೆಳೆಹಾನಿ ಪರಿಹಾರಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಮಾದರಿಯ ಬಗ್ಗೆ ಅಧ್ಯಯನ ಮಾಡಿ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದ್ದು, ಅಧ್ಯಯನ ವರದಿಯ ಬಳಿಕ ಸರ್ಕಾರದ ಆರ್ಥಿಕ ಸ್ಥಿತಿ ಆಧರಿಸಿ...
ಬಿಎಸ್ ಯಡಿಯೂರಪ್ಪ
ಬಿಎಸ್ ಯಡಿಯೂರಪ್ಪ

ಬೆಳಗಾವಿ: ಬೆಳೆಹಾನಿ ಪರಿಹಾರಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಮಾದರಿಯ ಬಗ್ಗೆ ಅಧ್ಯಯನ ಮಾಡಿ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದ್ದು, ಅಧ್ಯಯನ ವರದಿಯ ಬಳಿಕ ಸರ್ಕಾರದ ಆರ್ಥಿಕ ಸ್ಥಿತಿ ಆಧರಿಸಿ ಪರಿಹಾರ ಒದಗಿಸುವ ಕುರಿತು ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದಾರೆ.

ಅಥಣಿ ತಾಲ್ಲೂಕಿನ ದರೂರ ಗ್ರಾಮದಲ್ಲಿ ಶುಕ್ರವಾರ ನಡೆದ ಪರಿಹಾರ ವಿತರಣೆ- ಅಹವಾಲು ಸ್ವೀಕಾರ ಸಭೆಯಲ್ಲಿ ಮಾತನಾಡಿದ ಅವರು,
ಎನ್.ಡಿ.ಆರ್.ಎಫ್ ಮಾರ್ಗಸೂಚಿ ಪರಿಷ್ಕರಣೆ ಮಾಡುವಂತೆ ಪ್ರಧಾನಮಂತ್ರಿಗಳ ಗಮನಕ್ಕೆ ತರಲಾಗುವುದು. ಇದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಬಳಿಗೆ ನಿಯೋಗ ಕೊಂಡೊಯ್ಯಲಾಗುವುದು. ಎನ್.ಡಿ.ಆರ್.ಎಫ್. ಮಾರ್ಗಸೂಚಿಗಳನ್ನು ಪರಿಷ್ಕರಣೆ ಮಾಡಿದರೆ ಮಾತ್ರ ಹೆಚ್ಚಿನ ಪರಿಹಾರ ನೀಡಲು ಸಾಧ್ಯವಾಗಲಿದೆ ಎಂದರು.

ಇದಕ್ಕು ಮುನ್ನ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ್ದ ಸಿಎಂ, ಪ್ರವಾಹ ಪರಿಹಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸಲ್ಲಿಸಿದ್ದ ವರದಿಯನ್ನು ಕೇಂದ್ರ ಸರ್ಕಾರ ತಿರಸ್ಕರಿಸಿಲ್ಲ. ವಾಹ ಪರಿಹಾರ ಕುರಿತು ರಾಜ್ಯ ಸರ್ಕಾರ ಸಲ್ಲಿಸಿದ್ದ ಪ್ರಸ್ತಾವನೆಗೂ, ಕೇಂದ್ರ ನಡೆಸಿದ್ದ ವರದಿಗೂ ತಾಳೆಯಾಗಿಲ್ಲ. ಹೀಗಾಗಿ ಕೇಂದ್ರ ಸರ್ಕಾರ ಈ ಸಂಬಂಧ ಸ್ಪಷ್ಟನೆ ಕೇಳಿದೆ. ಪ್ರಸ್ತಾವನೆ ತಿರಸ್ಕರಿಸಿದೆ ಎಂದು ಹೇಳಿರುವುದು ಸುಳ್ಳು ಎಂದಿದ್ದರು.

ರಾಜ್ಯದ ಬೊಕ್ಕಸ ಇನ್ನೂ ಖಾಲಿಯಾಗಿಲ್ಲ. ಖಾಲಿಯಾಗಿದಿದ್ದರೆ ಪರಿಹಾರ ನೀಡಲು ಸಾಧ್ಯವಾಗುತ್ತಿರಲಿಲ್ಲ. ರಾಜ್ಯಕ್ಕೆ ಕೇಂದ್ರ ಸರ್ಕಾರ ಪರಿಹಾರ ನೀಡುವ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com