ವಿಶ್ವವಿಖ್ಯಾತ ಜಂಬೂಸವಾರಿ ನಾಳೆ, ಭರದಿಂದ ಸಾಗಿದ ಸಿದ್ಧತೆ

ಹಲವು ವರ್ಷಗಳ ಇತಿಹಾಸ ಹೊಂದಿರುವ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಆಕರ್ಷಣೆಯಾಗಿರುವ ಜಂಬೂ ಸವಾರಿಯು ವಿಜಯದಶಮಿಯ ದಿನವಾದ ಮಂಗಳವಾರ ನಡೆಯಲಿದ್ದು, ಸಿದ್ಧತೆಗಳು ಭರದಿಂದ ಸಾಗಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಮೈಸೂರು: ಹಲವು ವರ್ಷಗಳ ಇತಿಹಾಸ ಹೊಂದಿರುವ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಆಕರ್ಷಣೆಯಾಗಿರುವ ಜಂಬೂ ಸವಾರಿಯು ವಿಜಯದಶಮಿಯ ದಿನವಾದ ಮಂಗಳವಾರ ನಡೆಯಲಿದ್ದು, ಸಿದ್ಧತೆಗಳು ಭರದಿಂದ ಸಾಗಿದೆ. 

ಮುಖ್ಯಮಂತ್ರಿ ಯಡಿಯೂರಪ್ಪ ಅವರು ದಸರಾ ಮೆರವಣಿಗೆಗೆ ಚಾಲನೆ ನೀಡಲಿದ್ದು, ದಸರಾ ಜಂಬೂಸವಾರಿ ವೈಭವವನ್ನು ಕಣ್ತುಂಬಿಕೊಳ್ಳಲು ಜನರು ಕಾತದಿಂದ ಕಾಯುತ್ತಿದ್ದಾರೆ. 

ನಾಳೆ ಮಧ್ಯಾಹ್ನ 2.15ರಿಂದ 2.58ರವರೆಗೆ ಸಲ್ಲುವ ಶುಭ ಮಕರ ಲಗ್ನದಲ್ಲಿ ಅರಮನೆಯ ಬಲರಾಮ ದ್ವಾರದಲ್ಲಿ ನಂದಿಧ್ವಜಕ್ಕೆ ಯಡಿಯೂರಪ್ಪ ಅವರು ಪೂಜೆ ಸಲ್ಲಿಸಿ ಜಂಬೂ ಸವಾರಿಗೆ ಚಾಲನೆ ನೀಡಲಿದ್ದಾರೆ. ಬಳಿಕ 4.31ರಿಂದ 4.57ರವರೆಗೆ ಸಲ್ಲುವ ಶುಭ ಕುಂಭ ಲಗ್ನದಲ್ಲಿ ಅರಮನೆಯ ಒಳಾವರಣದ ವಿಶೇಷ ವೇದಿಕೆಯಲ್ಲಿ ನಿಂತು, ಗಜರಾಜ ಅರ್ಜುನ ಹೊರಲಿರುವ 750ಕೆಜಿ ತೂಕದ ಚಿನ್ನದ ಅಂಬಾರಿಯಲ್ಲಿ ನಾಡಿನ ಅಧಿದೇವತೆ ಶ್ರೀ ಚಾಮುಂಡೇಶ್ವರಿ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡುವರು. 

ನಂದಿಧ್ವಜ, ವೀರಗಾಸೆ, ನಾದಸ್ವರ, ನೌಪತ್, ನಿಸಾನೆ ಆನೆಗಳು, ಎನ್'ಸಿಸಿ, ಸ್ಕೌಟ್ಸ್, ಗೈಡ್ಸ್, ವಿವಿಧ ಪೊಲೀಸ್ ತುಕಡಿಗಳು, ನಾಡಿನ ಕಲೆ, ಸಂಸ್ಕೃತಿಯನ್ನು ಪ್ರತಿಂಬಿಸುವ 38 ಸ್ತಬ್ಧ ಚಿತ್ರಗಳು, 50 ಜನಪದ ಕಲಾತಂಡಗಳು, ಒಟ್ಟು 13 ಆನೆಗಳು ಜಂಬೂಸವಾರಿಗೆ ಸಾಥ್ ನೀಡಲಿವೆ. 

ಕೊನೆಯಲ್ಲಿ ಚಿನ್ನದ ಅಂಬಾರಿಹೊತ್ತ ಅರ್ಜುನ ಸಂಗಾತಿಗಳಾದ ಕಾವೇರಿ ಹಾಗೂ ವಿಜಯ ಜೊತೆ ಹೆಜ್ಜೆ ಹಾಕಲಿದ್ದಾನೆ. ಅರ್ಜುನ ಸತತ 8ನೇ ಬಾರಿಗೆ ಚಿನ್ನದ ಅಂಬಾರಿ ಹೊರಲಿದ್ದು, ಕೆ.ಆರ್.ವೃತ್ತ, ಸಯ್ಯಾಜಿರಾವ್ ರಸ್ತೆ, ಆಯುರ್ವೇದ ಕಾಲೇಜು ವೃತ್ತ, ಹೈವೇ ವೃತ್ತದ ಮೂಲಕ ಮೆರವಣಿಗೆ ಸಾಗಿ 5 ಕಿಮೀ ದೂರದ ಬನ್ನಿ ಮಂಟಪ ತಲುಪಲಿದೆ. 

ಸಂಜೆ 7 ಗಂಟೆ ಸುಮಾರಿಗೆ ಬನ್ನಿಮಂಟಪದಲ್ಲಿ ನಡೆಯುವ ಪಂಜಿನ ಕವಾಯತಿಯಲ್ಲಿ ರಾಜ್ಯಪಾಲ ವಜುಭಾಯಿ ವಾಲಾ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ, ಗೌರವ ವಂದನೆ ಸ್ವೀಕರಿಸುವರು. ಇದರೊಂದಿಗೆ 10 ದಿನಗಳಿಂದ ನಡೆಯುತ್ತಿರುವ ದಸರಾ ಉತ್ಸವಕ್ಕೆ ತೆರೆ ಬೀಳಲಿದೆ. ಜಂಬೂ ಸವಾರಿ ಸಾಗುವ ಮಾರ್ಗವನ್ನು ಸುಂದರಗೊಳಿಸುವ ಅಂತಿಮ ಸುತ್ತಿನ ಕೆಲಸಗಳು ಈಗಾಗಲೇ ಭರದಿಂದ ಸಾಗಿದ್ದು, ಮೆರವಣಿಗೆಯಲ್ಲಿ ಭಾಗವಹಿಸುವ ಸ್ತಬ್ಧ ಚಿತ್ರಗಳನ್ನು ಸಜ್ಜುಗೊಳಿಸುವ ಕಾರ್ಯ ಕೊನೇ ಹಂತಕ್ಕೆ ಬಂದಿದೆ. ಕಲಾತಂಡಘಳು ಕೂಡ ಈಗಾಗಲೇ ಸಜ್ಜುಗೊಂಡಿವೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com