ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದಾರೆ. ಈ ಸಂಬಂಧ ಕಾಂಗ್ರೆಸ್ ಹೈಕಮಾಂಡ್ ಘೋಷಣೆ ಹೊರಡಿಸಿದೆ.
ರಾಜ್ಯ ಕಾಂಗ್ರೆಸ್ ಉಸ್ತುವಾರಿಯಾಗಿರುವ ಕೆ.ಸಿ. ವೇಣುಗೋಪಾಲ್ ಈ ಘೋಷಣೆ ಮಾಡಿದ್ದಾರೆ.
ಇದೇ ವೇಳೆ ವಿಧಾನ ಪರಿಷತ್ ಪ್ರತಿಪಕ್ಷ ನಾಯಕರಾಗಿ ಎಸ್.ಆರ್. ಪಾಟೀಲ್ ಅವರನ್ನು ನೇಮಕ ಮಾಡಲಾಗಿದೆ.
ರಾಜ್ಯ ವಿಧಾನಸಭೆ ವಿಪಕ್ಷ ನಾಯಕನ ರೇಸ್ ಎಚ್ಕೆ ಪಾಟೀಲ್, ಜಿ. ಪರಮೇಶ್ವರ್ ಹೆಸರುಗಳು ಇದ್ದು ಹೈಕಮಾಂಡ್ ನಾಯಕರು ರಾಜ್ಯ ಶಾಸಕರ ಅಭಿಪ್ರಾಯ ಸಂಗ್ರಹ ಮಾಡಿದ್ದರು.ಆ ವೇಳೆ ಸಿದ್ದರಾಮಯ್ಯ ಪರವಾಗಿ ಬಹುತೇಕ ಶಾಸಕರು ಇದ್ದ ಕಾರಣ ಅವರನ್ನೇ ವಿಪಕ್ಷ ನಾಯಕರನ್ನಾಗಿ ಮಾಡಲಾಗಿದೆ.
Advertisement