ಗದಗ ಪುರಸಭೆ ಸಿಬ್ಬಂದಿ ಆತ್ಮಹತ್ಯೆಗೆ ಶರಣು

ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಪುರಸಭೆ ಸಿಬ್ಬಂದಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಶಿರಹಟ್ಟಿ ಪಟ್ಟಣದಲ್ಲಿ ನಡೆದಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 

ಗದಗ:  ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಪುರಸಭೆ ಸಿಬ್ಬಂದಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಶಿರಹಟ್ಟಿ ಪಟ್ಟಣದಲ್ಲಿ ನಡೆದಿದೆ.

30 ವರ್ಷದ ಬಸವರಾಜ್ ಹೊಸೂರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ಶಿರಹಟ್ಟಿ ಪಟ್ಟಣ ಪಂಚಾಯತ್ ನಲ್ಲಿ ವಾಲ್ ಮನ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.

ಮೂಲತಃ ಧಾರವಾಡ ಜಿಲ್ಲೆಯ ಅಣ್ಣಿಗೇರಿ ಗ್ರಾಮದವನಾದ ಬಸವರಾಜ್ ದಿನಂಪ್ರತಿ ಹಿರಿಯ ಅಧಿಕಾರಿಗಳಿಂದ ಕಿರುಕುಳ ಅನುಭವಿಸುತ್ತಿದ್ದ‌ರು ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಪುರಸಭೆ ಮುಖ್ಯಾಧಿಕಾರಿ ಶೋಭಾ ಬೆಳ್ಳಿಕೊಪ್ಪ ಅವರ ಕಿರುಕುಳಕ್ಕೆ ಬೇಸತ್ತು ಬಾಡಿಗೆ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ ಎಂದು ಆರೋಪಿಸಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಶಿರಹಟ್ಟಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com