ಬೆಂಗಳೂರು: ಪೋಷಕರು ಮೊಬೈಲ್ ಕಿತ್ತುಕೊಂಡಿದ್ದಕ್ಕೆ 10ನೇ ತರಗತಿ ವಿದ್ಯಾರ್ಥಿನಿ ನೇಣಿಗೆ ಶರಣು

ಮೊಬೈಲ್‌ನ್ನು ಪೋಷಕರು ಕಿತ್ತುಕೊಂಡಿದ್ದರಿಂದ ನೊಂದ 10ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ನೇಣಿಗೆ ಶರಣಾಗಿರುವ ದಾರುಣ ಘಟನೆ ರಾಜಾಜಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ರಾತ್ರಿ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಮೊಬೈಲ್‌ನ್ನು ಪೋಷಕರು ಕಿತ್ತುಕೊಂಡಿದ್ದರಿಂದ ನೊಂದ 10ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ನೇಣಿಗೆ ಶರಣಾಗಿರುವ ದಾರುಣ ಘಟನೆ ರಾಜಾಜಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ರಾತ್ರಿ ನಡೆದಿದೆ.

ರಾಜ್‌ಕುಮಾರ್ ರಸ್ತೆಯ ಠ್ಯಾಗೂರ್ ಶಾಲೆಯಲ್ಲಿ 10ನೇ ತರಗತಿ ವಿದ್ಯಾರ್ಥಿನಿ ಬೆಸ್ಲಿ(16) ಆತ್ಮಹತ್ಯೆಗೆ ಶರಣಾಗಿರುವ ವಿದ್ಯಾರ್ಥಿನಿ.

10ನೇ ತರಗತಿ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳದೆ ಸ್ನೇಹಿತರು ಕೊಟ್ಟ ಮೊಬೈಲ್‌ನಲ್ಲೇ ಕಾಲ ಕಳೆಯುತ್ತಿರುವುದನ್ನು ನೋಡಿದ ಪೋಷಕರು ಮೊಬೈಲ್‌ನ್ನು ಕಿತ್ತುಕೊಂಡಿದ್ದರು. ನಿನ್ನೆ ಸಂಜೆ ಮನೆಯಲ್ಲಿ ಯಾರೂ ಇಲ್ಲದಾಗ ಬೆಸ್ಲಿ ನೇಣಿಗೆ ಶರಣಾಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಜಾಜಿನಗರ ಪೊಲೀಸರು ಪೋಷಕರ ಹೇಳಿಕೆ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ವಿದ್ಯಾರ್ಥಿನಿಯ ತಂದೆ ಅರ್ಚಕರಾಗಿ ಹಾಗೂ ತಾಯಿ ಖಾಸಗಿ ಆಸ್ಪತ್ರೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ಪುತ್ರಿಯನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com