ಕಲಾಪ ಚಿತ್ರೀಕರಣಕ್ಕೆ ಮಾಧ್ಯಮ ನಿರ್ಬಂಧ ಪ್ರಾಯೋಗಿಕ: ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ

ಲೋಕಸಭೆ ಹಾಗೂ ರಾಜ್ಯಸಭೆಗಳಲ್ಲಿರುವಂತೆಯೇ ರಾಜ್ಯದ ಉಭಯ ಸದನಗಳಲ್ಲಿಯೂ ವ್ಯವಸ್ಥೆ ಮಾಡಲಾಗಿದ್ದು, ಮಾಧ್ಯಮದವರಿಗೆ ಕಲಾಪದ ಎಲ್ಲಾ ಮಾಹಿತಿಯು ಸಿಗಲಿದೆ ಎಂದು ವಿಧಾನಸಭೆಯ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಸ್ಪಷ್ಟನೆ ನೀಡಿದ್ದಾರೆ.
ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ
ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ
Updated on

ಬೆಂಗಳೂರು: ಲೋಕಸಭೆ ಹಾಗೂ ರಾಜ್ಯಸಭೆಗಳಲ್ಲಿರುವಂತೆಯೇ ರಾಜ್ಯದ ಉಭಯ ಸದನಗಳಲ್ಲಿಯೂ ವ್ಯವಸ್ಥೆ ಮಾಡಲಾಗಿದ್ದು, ಮಾಧ್ಯಮದವರಿಗೆ ಕಲಾಪದ ಎಲ್ಲಾ ಮಾಹಿತಿಯು ಸಿಗಲಿದೆ ಎಂದು ವಿಧಾನಸಭೆಯ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಸ್ಪಷ್ಟನೆ ನೀಡಿದ್ದಾರೆ.

ಕಲಾಪ ದೃಶ್ಯ ಚಿತ್ರೀಕರಣಕ್ಕೆ ಖಾಸಗಿ ಮಾಧ್ಯಮಗಳಿಗೆ ನಿರ್ಬಂಧ ವಿಚಾರವಾಗಿ ಸುದ್ದಿಗಾರರಿಗೆ ವಿಧಾನಸೌಧದಲ್ಲಿ ಪ್ರತಿಕ್ರಿಯಿಸಿದ ಸ್ಪೀಕರ್, ಇಂದಿನಿಂದ ಅಧಿವೇಶನ ಆರಂಭವಾಗುತ್ತಿದ್ದು, ರಾಜ್ಯದ ಅಭಿವೃದ್ಧಿ ಬೆಳವಣಿಗೆಗೆ ಸದನದಲ್ಲಿ ಚರ್ಚೆ ಆಗಬೇಕು ಎನ್ನುವ ಅಪೇಕ್ಷೆಯಿದೆ. ಯಾವುದನ್ನು ನಾವು ಮುಚ್ಚಿಡುವುದಿಲ್ಲ‌. ಈ ಬಗ್ಗೆ ಕೆಲ ವರ್ಷಗಳ ಹಿಂದೆಯೇ ಚರ್ಚೆ ನಡೆದಿತ್ತು. ಸ್ಪೀಕರ್ ಸಮ್ಮೇಳನದಲ್ಲಿ ನಿರಂತರವಾಗಿ ಮಾಧ್ಯಮಗಳ ನಿರ್ಬಂಧ ಬಗ್ಗೆ ಚರ್ಚೆಯಾಗಿದೆ. ಲೋಕಸಭೆ ಮತ್ತು ರಾಜ್ಯಸಭೆ ಹಾಗೇಯೇ ನಾವು ಇಲ್ಲಿ ವ್ಯವಸ್ಥೆ ಮಾಡಲಾಗುವುದು ಎಂದರು.

ಮಾಧ್ಯಮಗಳ ನಿರ್ಬಂಧ ಪ್ರಾಯೋಗಿಕವಾಗಿ ಮೂರು ದಿನಗಳು ಇರಲಿದೆ. ಬಳಿಕ ಇದನ್ನು ಮುಂದುವರೆಸಬೇಕೋ ಅಥವಾ ಬೇಡವೋ ಎಂಬ ಬಗ್ಗೆ ಚಚರ್ಚಿಸಲಾಗುವುದು.ಈ ಮೂರು ದಿನಗಳಲ್ಲಿ ಬರುವ ಸಲಹೆ ಸೂಚನೆ ಪರಿಗಣಿಸಿ ಮಾಧ್ಯಮಗಳ ನಿರ್ಬಂಧ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com