ನೆರೆ ಹಾವಳಿಯನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಲು ಸಾಧ್ಯವಿಲ್ಲ: ಮಾಧುಸ್ವಾಮಿ

ರಾಜ್ಯದಲ್ಲಿ ಸಂಭವಿಸಿದ ಪ್ರವಾಹ ಮತ್ತು ಪ್ರವಾಹ ಪರಿಸ್ಥಿತಿಯನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಲು ಸಾಧ್ಯವಿಲ್ಲ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ಶನಿವಾರ...
ಮಾಧುಸ್ವಾಮಿ
ಮಾಧುಸ್ವಾಮಿ
Updated on

ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರವಾಹ ಮತ್ತು ಪ್ರವಾಹ ಪರಿಸ್ಥಿತಿಯನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಲು ಸಾಧ್ಯವಿಲ್ಲ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ಶನಿವಾರ ವಿಧಾನಪರಿಷತ್ತಿನಲ್ಲಿ ಸ್ಪಷ್ಟಪಡಿಸಿದರು.

ಪ್ರವಾಹ ಪರಿಸ್ಥಿತಿಯಿಂದಾಗಿ ರಾಜ್ಯದಲ್ಲಿ ಆಗಿರುವ ನಷ್ಟ ಹಾಗೂ ಕೇಂದ್ರ ಸರ್ಕಾರ ಸಮರ್ಪಕವಾಗಿ ಪರಿಹಾರ ಒದಗಿಸಿಲ್ಲ. ಈ ದುರಂತವನ್ನು  ರಾಷ್ಟ್ರೀಯ ವಿಪತ್ತು ಎಂದು ಘೋಷಿಸುವಂತೆ ಸರ್ಕಾರವನ್ನು ಸದನದಲ್ಲಿ ಆಗ್ರಹಿಸಿದರು.

ಆಗ ಸಚಿವ ಮಾಧು ಸ್ವಾಮಿ, ಈ ನೈಸರ್ಗಿಕ ವಿಕೋಪವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಣೆ ಮಾಡಲು ಈಗ ಸಾಧ್ಯವಿಲ್ಲ‌. ವಿಪತ್ತು ಎಂದು ಘೋಷಿಸಲು ಅದಕ್ಕೆ ಅದರದೇ ಆತ ನೀತಿ ನಿಯಮಗಳಿವೆ. ಈ ಸಂಬಂಧ ಸದನದಲ್ಲಿ ಪ್ರಸ್ತಾಪಿಸಲು ನೋಟಿಸ್ ನೀಡಬೇಕಾಗುತ್ತದೆ. ಈ ಬಗ್ಗೆ ಪಶೀಲಿಸಲು ಸಮಯ ಬೇಕಾಗಿರುವುದರಿಂದ ವಿಪತ್ತು ಎಂದು ಘೋಷಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.

ಇದಕ್ಕೆ ಜೆಡಿಎಸ್ ನ ಟಿ.ಎ. ಶರವಣ ಮತ್ತಿತರರು ತೀವ್ರ ಆಕ್ಷೇಪ ವ್ಯಕ್ತಪಡಿಸಿ, ಏಕೆ ಘೋಷಣೆ ಮಾಡಲು ಸಾಧ್ಯವಿಲ್ಲ ಎಂದು ಮರುಪ್ರಶ್ನೆ ಹಾಕಿದರು. ಶರವಣ ಮಾತಿಗೆ ಸಿಟ್ಟಾದ ಜೆ.ಸಿ. ಮಾಧುಸ್ವಾಮಿ,‌ " ನಿನಗೆ ರಾಷ್ಟ್ರೀಯ ವಿಪತ್ತು ಅಂದರೆ ಏನು ಗೊತ್ತಿದೆಯಾ? ಹೇಳಪ್ಪ. ರಾಷ್ಟ್ರೀಯ ವಿಪತ್ತು ಅಂದರೆ ಏನು ಎಂದು ಮರುಪ್ರಶ್ನೆ ಹಾಕಿದಾಗ ಶರವಣ ನಿರುತ್ತರಾವಾದರು. 

ಮಾಧುಸ್ವಾಮಿ ಮಾತಿಗೆ ಧ್ವನಿಗೂಡಿಸಿದ ಆರ್‌ಅಶೋಕ್‌, ರಾಷ್ಟ್ರೀಯ ವಿಪತ್ತು ಎಂದು ಘೋಷಿಸಲು ಸಾಧ್ಯವಿಲ್ಲ. ರಾಷ್ಟ್ರೀಯ ವಿಪತ್ತು ಘೋಷಣೆ ಮಾಡಲು ಸಾಕಷ್ಟು ಕಾನೂನು ತೊಡಕುಗಳಿರುವದರಿಂದ ಘೋಷಣೆ ಮಾಡಲಾಗದು ಎಂದರು. 

ಸರ್ಕಾರದ ಉತ್ತರಕ್ಕೆ ತೃಪ್ತರಾದ ಕಾಂಗ್ರೆಸ್ ಸದಸ್ಯರು, ರಾಷ್ಟ್ರೀಯ ವಿಪತ್ತು ಎಂದು ಘೋಷಣೆಯಾಗಿಲ್ಲ. ಮನೆ ಕಳೆದುಕೊಂಡವರಿಗೆ ಪರಿಹಾರದ ಹಣವನ್ನು ಹತ್ತು ಲಕ್ಷ ರೂಪಾಯಿಗೆ ಹೆಚ್ಚಿಸಬೇಕು. ಜಮೀನು ಕಳೆದುಕೊಂಡವರಿಗೆ ಬದಲಿ ಜಮೀನು ನೀಡುವಂತೆ ಆಗ್ರಹಿಸಿ ಸಭಾಪತಿ ಪೀಠದ ಮುಂಭಾಗಕ್ಕೆ ತೆರಳಿ ಪ್ರತಿಭಟನೆ ನಡೆಸಿದರು. ಆದರೆ ಕಾಂಗ್ರೆಸ್ ಸದಸ್ಯರ ಪ್ರತಿಭಟನೆ ಗೆ ಜೆಡಿಎಸ್ ಸದಸ್ಯರು ಬೆಂಬಲ ನೀಡಲಿಲ್ಲ. ಸರ್ಕಾರ ರಾಷ್ಟ್ರೀಯ ವಿಪತ್ತು ಎಂದು ಘೋಷಿಸಲು ಸ್ಪಷ್ಟವಾಗಿ ನಿರಾಕರಿಸಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com