ರಮೇಶ್, ಪರಮೇಶ್ವರ್
ರಮೇಶ್, ಪರಮೇಶ್ವರ್

ಪರಮೇಶ್ವರ್ ಪಿಎ ಆತ್ಮಹತ್ಯೆ :ಜ್ಞಾನಭಾರತಿ ಠಾಣೆಯಲ್ಲಿ ಎಫ್ ಐಆರ್ ದಾಖಲು

ಮಾಜಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಆಪ್ತ ಸಹಾಯಕ ರಮೇಶ್ ಆತ್ಮಹತ್ಯೆಗೆ ಸಂಬಂಧಿಸಿದಂತೆ ಜ್ಞಾನಭಾರತಿ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.

ಬೆಂಗಳೂರು: ಮಾಜಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಆಪ್ತ ಸಹಾಯಕ ರಮೇಶ್ ಆತ್ಮಹತ್ಯೆಗೆ ಸಂಬಂಧಿಸಿದಂತೆ ಜ್ಞಾನಭಾರತಿ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.

ರಮೇಶ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಳ ಪರಿಶೀಲನೆ ಹಾಗೂ ವೈದ್ಯರ ಮೌಖಿಕ ವರದಿಯ ಸಾರಾಂಶ ಆಧರಿಸಿ ಎಫ್ ಐಆರ್ ದಾಖಲಿಸಲಾಗಿದೆ.

ರಮೇಶ್ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಐಟಿ ಅಧಿಕಾರಿಗಳ ಕಿರುಕುಳವೇ ರಮೇಶ್ ಆತ್ಮಹತ್ಯೆಗೆ ಕಾರಣ ಎಂದು ಆರೋಪಿಸಿ ಕುಟುಂಬಸ್ಥರು ದೂರು ನೀಡಿದ್ದರು. ಸಿಆರ್ ಪಿಸಿ ಸೆಕ್ಷನ್ 174ರ ಅಡಿಯಲ್ಲಿ ಎಫ್ ಐಆರ್ ದಾಖಲಿಸಲಾಗಿದೆ.  ರಮೇಶ್ ಬರೆದಿಟ್ಟ ಡೆತ್ ನೋಟ್ ನ್ನು  ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. 

ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ರಮೇಶ್ ಮನೆಗೆ ಭೇಟಿ ನೀಡಿರುವುದು ಸಿಸಿಟಿವಿ ದೃಶ್ಯಾವಳಿಗಳಲ್ಲಿ ಕಂಡುಬಂದಿದೆ. ಆದರೆ, ಇದನ್ನು ಐಟಿ ಅಧಿಕಾರಿಗಳು ಒಪ್ಪಿಕೊಳ್ಳುತ್ತಿಲ್ಲ. 

 ರಮೇಶ್ ಮನೆಯ ಸಿಸಿಟಿವಿ ದೃಶ್ಯಾವಳಿ, ಮರಣೋತ್ತರ ವರದಿಗಳನ್ನು ಪೊಲೀಸರು ಪರಿಶೀಲಿಸಲಿದ್ದಾರೆ .ರಮೇಶ್ ಕೊನೆಯ ಬಾರಿಗೆ ಮಾತನಾಡಿದ್ದ ಸ್ನೇಹಿತರಿಂದ ಪೊಲೀಸರು ಹೇಳಿಕೆ ಪಡೆಯಲಿದ್ದಾರೆ. ಅವಶ್ಯಕತೆ ಬಿದ್ದಲ್ಲಿ ಮತ್ತಷ್ಟು  ಸೆಕ್ಷನ್ ಗಳನ್ನು ಸೇರಿಸಲು ಸಿದ್ಧತೆ ನಡೆಸಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com