ಕರ್ನಾಟಕದಿಂದ ಮಹಾರಾಷ್ಟ್ರಕ್ಕೆ ಶೀಘ್ರದಲ್ಲೇ ನೀರು: ಗೃಹ ಸಚಿವ ಅಮಿತ್ ಶಾ

ನೀರು ಹಂಚಿಕೆ ಕುರಿತಂತೆ ಕರ್ನಾಟಕ ಹಾಗೂ ಮಹಾರಾಷ್ಟ್ರ ರಾಜ್ಯಗಳ ನಡುವೆ ತಿಕ್ಕಾಟ ಮುಂದುವರೆಯುತ್ತಿರುವ ನಡುವಲ್ಲೇ, ಕರ್ನಾಟಕದಿಂದ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಗೆ ಕುಡಿಯಲು ಹಾಗೂ ಕೃಷಿ ಭೂಮಿಗೆ ನೀರು ಒದಗಿಸುವುದಾಗಿ ಗೃಹ ಸಚಿವ ಅಮಿತ್ ಶಾ ಅವರು ಮಹಾರಾಷ್ಟ್ರ ಜನತೆಗೆ ಭರವಸೆ ನೀಡಿದ್ದಾರೆ. 
ಅಮಿತ್ ಶಾ
ಅಮಿತ್ ಶಾ

ಹುಕ್ಕೇರಿ: ನೀರು ಹಂಚಿಕೆ ಕುರಿತಂತೆ ಕರ್ನಾಟಕ ಹಾಗೂ ಮಹಾರಾಷ್ಟ್ರ ರಾಜ್ಯಗಳ ನಡುವೆ ತಿಕ್ಕಾಟ ಮುಂದುವರೆಯುತ್ತಿರುವ ನಡುವಲ್ಲೇ, ಕರ್ನಾಟಕದಿಂದ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಗೆ ಕುಡಿಯಲು ಹಾಗೂ ಕೃಷಿ ಭೂಮಿಗೆ ನೀರು ಒದಗಿಸುವುದಾಗಿ ಗೃಹ ಸಚಿವ ಅಮಿತ್ ಶಾ ಅವರು ಮಹಾರಾಷ್ಟ್ರ ಜನತೆಗೆ ಭರವಸೆ ನೀಡಿದ್ದಾರೆ. 

ಮಹಾರಾಷ್ಟ್ರದ ವಿಧಾನಸಭಾ ಕ್ಷೇತ್ರಗಳಲ್ಲಿ ಆಯೋಜಿಸಲಾಗಿದ್ದ ಬಿಜೆಪಿ ರ್ಯಾಲಿಯಲ್ಲಿ ಮಾತನಾಡಿರುವ ಅವರು, ಜಾಟ್'ನ ಕೆಲವು ಭಾಗಗಳಿಗೆ ಕರ್ನಾಟಕದಿಂದ ನೀರು ತರಲು ಈಗಾಗಲೇ ಯೋಜನೆ ರೂಪಿಸಲಾಗಿದೆ ಎಂದು ಹೇಳಿದ್ದಾರೆ. 

ವಿಜಯಪುರದ ತುಬಜಿ-ಬಬಲೇಶ್ವರ ಏತ ನೀರಾವರಿ ಯೋಜನೆಯಿಂದ ಮಹಾರಾಷ್ಟ್ರ ರಾಜ್ಯಕ್ಕೆ ನೀರು ಬಿಡುಗಡೆ ಮಾಡಲಾಗುತ್ತದೆ. ಈ ಬಗ್ಗೆ ಈಗಾಗಲೇ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀರ್ ಅವರು ಕರ್ನಾಟಕದ ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ಮಹಾರಾಷ್ಟ್ರ ಗಡಿ ಭಾಗದ ಜನತೆಗೆ ನೀರು ಒದಗಿಸುವಲ್ಲಿ ಕೇಂದ್ರ ಸರ್ಕಾರ ಕೂಡ ಸೂಕ್ತ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com